ಸಮೀಕ್ಷೆ ವೇಳೆ ಸ್ಪಷ್ಟವಾಗಿ ಜಾತಿ ಬರೆಸಿ: ಚಿಂತಕ ಅರಕಲವಾಡಿ ನಾಗೇಂದ್ರ ಮನವಿ

Published on

ಮೈಸೂರು: ಒಳಮೀಸಲಾತಿ ಸಮೀಕ್ಷೆ ವೇಳೆ ಮಾದಿಗ ಸಮುದಾಯದವರು ಕಾಲಂ 61ರಲ್ಲಿ ‘ಮಾದಿಗ’ ಎಂದು ಸ್ಪಷ್ಟವಾಗಿ ಬರೆಸಬೇಕು ಎಂದು ಪ್ರಗತಿಪರ ಚಿಂತಕ ಅರಕಲವಾಡಿ ನಾಗೇಂದ್ರ ಮನವಿ ಮಾಡಿದರು.

ಕಳೆದ ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಒಳಮೀಸಲಾತಿ ಜಾರಿಗೊಳಿಸುವ ಕಾಲ ಸನ್ನಿಹಿತವಾಗಿದೆ. ಸುಪ್ರೀಂಕೋರ್ಟ್ ಒಳಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ. ಹಾಗಾಗಿ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗ ರಚಿಸಲಾಗಿದೆ. ಆಯೋಗದಿಂದ ಇದೀಗ ಮನೆ ಮನೆ ಸಮೀಕ್ಷೆ ನಡೆಯುತ್ತಿದ್ದು, ಮಾದಿಗ ಸಮುದಾಯದವರು ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ.

ಗಣತಿದಾರರು ಒಂದೆರಡು ಪ್ರಶ್ನೆಗಳಿಗೆ ಮಾತ್ರ ಉತ್ತರ ಪಡೆದು ಉಳಿದ ಪ್ರಶ್ನೆಗಳಿಗೆ ಅವರೇ ಉತ್ತರ ಬರೆದುಕೊಂದರೆ ಮುಂದೆ ಅದು ತೊಂದರೆಯಾಗಲಿದೆ. ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡಬೇಕು. ಮುಂದಿನ 20-30 ವರ್ಷಗಳ ಕಾಲ ಈ ವರದಿಯ ಆಧಾರದಲ್ಲಿ ಸರ್ಕಾರ ಯೋಜನೆ ಜಾರಿಗೊಳಿಸಲು ಅನುಕೂಲವಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜನಚೈತನ್ಯ ಫೌಂಡೇಷನ್ ಅಧ್ಯಕ್ಷ ಆರ್.ಲಕ್ಷ್ಮಣ್, ಸಾಮಾಜಿಕ ನ್ಯಾಯಪರ ವೇದಿಕೆ ಅಧ್ಯಕ್ಷ ಡಾ. ಮರಡೀಪುರ ರವಿಕುಮಾರ್, ಹೋರಾಟಗಾರರಾದ ಸುನೀಲ್, ಬಿ.ಬಸಪ್ಪ, ಜಗದೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net