ಧೈರ್ಯದಿಂದ ಪರೀಕ್ಷೆ ಬರೆಯಿರಿ

20240325_100127
Published on

ಮೂಗೂರು: ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ಧೈರ್ಯದಿಂದ ಪರೀಕ್ಷೆ ಬರೆಯಿರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಸಲಹೆ ನೀಡಿದರು.


ಮೂಗೂರು ಕೆಪಿಎಸ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಆಗಮಿಸಿದ ಪರೀಕ್ಷಾರ್ಥಿಗಳಿಗೆ ತಂಪು ಪಾನೀಯ ನೀಡಿ ಸ್ವಾಗತಿಸಿ ಮಾತನಾಡಿ, ಪರೀಕ್ಷಾ ಕೇಂದ್ರಕ್ಕೆ ಅಗತ್ಯ ಸೌಲಭ್ಯ ಒದಗಿಸಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ ಮುಖ್ಯಸ್ಥರಿಗೆ ತಿಳಿಸಬೇಕು ಎಂದು ಹೇಳಿ ಶುಭ ಹಾರೈಸಿದರು.
ಇದಕ್ಕೂ ಮೊದಲು ಕುರುಬೂರು, ವಾಟಾಳು, ಮೂಗೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಮೂಗೂರು ಕೆಪಿಎಸ್ ಶಾಲೆಯ ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು, ಪಾಲಕರು ಹೂವು ಚೆಲ್ಲಿ ಬರಮಾಡಿಕೊಂಡರು.


ಮೂಗೂರು ಕೆಪಿಎಸ್ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ 229 ವಿದ್ಯಾರ್ಥಿಗಳು ಕನ್ನಡ ಭಾಷೆ ಪರೀಕ್ಷೆಗೆ ಹಾಜರಾಗಿದ್ದು, ನಾಲ್ವರು ಗೈರು ಹಾಜರಾಗಿದ್ದಾರೆ ಎಂದು ಉಪ ಪ್ರಾಂಶುಪಾಲ ಸಿ.ಪುಟ್ಟಸ್ವಾಮಿ ತಿಳಿಸಿದರು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾದೇವಸ್ವಾಮಿ, ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net