

ಬೆಳಗಾವಿ:ಮಹದಾಯಿ ಯೋಜನೆಗೆ ಕೆಲಸ ಆರಂಭಿಸಲು ಅರಣ್ಯ ಇಲಾಖೆ ಅನುಮತಿ ನೀಡಿಲ್ಲ.ಕೇಂದ್ರ ಸರ್ಕಾರ ಇತ್ಯರ್ಥ ಪಡಿಸಿದರೆ ನಾಳೆಯೇ ನೀರಾವರಿ ಯೋಜನೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿದೆ ಭಾನುವಾರ ಮಾತನಾಡಿದ ಅವರು, ರಾಜ್ಯದಲ್ಲಿನ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ.ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.