ದಕ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾಗಿ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ ಆಯ್ಕೆ

baala
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಮಂಗಳೂರು ಬಾವುಟ ಗುಡ್ಡೆಯ ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಹಾಲಿ ಅಧ್ಯಕ್ಷ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ 2023-25ರ ಸಾಲಿನ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಕರ್ನಲ್ ಜಯಚಂದ್ರನ್, ಕಾರ್ಯದರ್ಶಿಯಾಗಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಜೊತೆ ಕಾರ್ಯದರ್ಶಿಯಾಗಿ ಜೆಡಬ್ಲ್ಯೂಒ ಬಾಲಚಂದ್ರ, ಕೋಶಾಧಿಕಾರಿಯಾಗಿ ಪಿ.ಒ ಸುಧೀರ್ ಪೈ ಮತ್ತು 20 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಲೆಫ್ಟಿನೆಂಟ್ ಕರ್ನಲ್ ಪ್ರಭಾಕರ್ ರೈ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಸಂಘದ ಚಟುವಟಿಕೆಗಳಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿರುವ ಕರ್ನಲ್ ಭಂಡಾರಿ, ಕ್ಯಾಪ್ಟನ್ ದೀಪಕ್ ಅಡ್ಯಂತಾಯ ಮತ್ತು ಸಾರ್ಜೆಂಟ್ ಭಗವಾನ್ ದಾಸ್ ಅವರನ್ನು ಸನ್ಮಾನಿಸಲಾಯಿತು.
ಬ್ರಿಗೇಡಿಯರ್ ಐ.ಎನ್ ರೈ ಮತ್ತು ಕರ್ನಲ್ ಶರತ್ ಭಂಡಾರಿ ಮಾಜಿ ಸೈನಿಕರಿಗೆ ಲಭ್ಯ ಸವಲತ್ತುಗಳ ಬಗ್ಗೆ ಮಾಹಿತಿ ಮತ್ತು ಸಲಹೆಗಳನ್ನು ನೀಡಿದರು. ನೂತನ ಅಧ್ಯಕ್ಷ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ ಮಾತನಾಡಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಸೈನಿಕರು ಸಂಘದ ಸದಸ್ಯರಾಗಿ ಸಂಘವನ್ನು ಬಲಪಡಿಸಲು ಕರೆ ನೀಡಿದರು.
ನಿಕಟಪೂರ್ವ ಅಧ್ಯಕ್ಷ ಸಿಪಿಒ ವಿಕ್ರಂ ದತ್ತ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ ವಂದಿಸಿದರು.

ಫೋಟೋ
ಎಂಎನ್‌ಜಿ- ಎಸ್‌ಇಪಿ 9- ಎಕ್ಸ್‌ಸರ್ವೀಸ್ ಮೆನ್ಸ್
ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಜರುಗಿದ ದಕ ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ, ಕರ್ನಲ್ ಜಯಚಂದ್ರನ್, ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಬ್ರಿಗೇಡಿಯರ್ ಐ.ಎನ್ ರೈ ಮತ್ತು ಕರ್ನಲ್ ಶರತ್ ಭಂಡಾರಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net