ಯಾದಗಿರಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ

31-Yadagiri-05
Published on

ಯಾದಗಿರಿ : ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸುವ ಹಿನ್ನೆಲೆ 2025ರ ಏಪ್ರಿಲ್ 25 ರಂದು ಮಧ್ಯಾಹ್ನ 12 ಗಂಟೆಗೆ ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶದನ್ವಯ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ಜಿಲ್ಲಾಡಳಿತ ವತಿಯಿಂದ ಶಿಷ್ಠಾಚಾರ ಪಾಲಿಸಿ, ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸಿ, ಅಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರಿಂದ ಪ್ರಶಸ್ತಿ ಪ್ರಧಾನ ಮಾಡಲು ಕ್ರಮವಹಿಸಲು ಸೂಚಿಸಿದೆ. ಸರ್ಕಾರದ ಆದೇಶದನ್ವಯ 2025ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸುವ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದ ಸವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ಪ್ರಶಸ್ತಿ ಪ್ರದಾನ ಮಾಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ 2025ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸುವ ಸಂಬAಧ ಚರ್ಚಿಸಲು ಅಂದು ಸಭೆಯನ್ನು ನಿಗಧಿಪಡಿಸಲಾಗಿದೆ. ಈ ಸಭೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಾವೇ ಖುದ್ದಾಗಿ ಕಡ್ಡಾಯವಾಗಿ ಉಪಸ್ಥಿತರಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net