ಹೆಡ್‌ ಕಾನ್ಸ್ಟೇಬಲ್ ಗಿರೆಪ್ಪ ಮುಖ್ಯಮಂತ್ರಿ ಪದಕ

ಗಿರೆಪ್ಪ ಮುಖ್ಯಮಂತ್ರಿ ಪದಕ
Published on

ಯಾದಗಿರಿ : ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ನೀಡುವ 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್‌ಕಾನ್ಸ್ಟೇಬಲ್ ಗಿರೆಪ್ಪ ಭಾಜನರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವಿಕೇರಾ ಗ್ರಾಮದವರಾಗಿದ್ದು, 2005ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದು, ಹಿಂದೆ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಕಳೆದು ಹಲವು ವರ್ಷಗಳಿಂದ ಜಿಲ್ಲಾ ಪೊಲೀಸ್ ಕಛೇರಿಯ ಅಪರಾಧ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಇವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಕಠಿಣ ಪರಿಶ್ರಮ ಹಾಗೂ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಉತ್ತಮ ಹೆಸರು ಹೊಂದಿದ್ದು, ಇವರಿಗೆ ಈ ಪದಕಕ್ಕೆ ಆಯ್ಕೆಯಾಗಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿರುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net