ಲಂಚ ಪಡೆಯುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದ ತಹಶೀಲ್ದಾರ

acb
Published on

ಯಾದಗಿರಿ: ತಹಶೀಲ್ದಾರರೊಬ್ಬರು ಸರ್ಕಾರಿ ಕೆಲಸ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಹಶೀಲ್ದಾರ್ ಸಂಗಮೇಶ್ ಜಿಡಗೆ ಆರೋಪಿ ಸ್ಥಾನದಲ್ಲಿರುವ ತಹಶೀಲ್ದಾರ. ಅವರು ಜಮೀನು ಪಾಲು ವಿಚಾರಕ್ಕೆ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರ ಮುಂಗಡವಾಗಿ ಸೋಮವಾರದಂದು ಐದು ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಸಂಗಮೇಶ್​ನನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ್ ದಾಳಿಯಲ್ಲಿ ಭಾಗಿಯಾಗಿದ್ದರು. ಸಿಬ್ಬಂದಿ ಅಮರ್, ವಿಜಯ್, ಗುತ್ತಪ್ಪ ಅವರಿಂದ ಪರಿಶೀಲನೆ ಮುಂದುವರಿಸಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net