ವಿದ್ಯಾನಗರ ಕಾಲನಿ ಶ್ರಾವಣ ಪುರಾಣ ಮಂಗಲೋತ್ಸವ ಸೆ.3 ರಂದು : ಯಡ್ರಾಮಿ ಪೂಜ್ಯರಿಗೆ ಆಹ್ವಾನ

0109 KLB 01
Published on


ಕಲಬುರಗಿ : ಶ್ರಾವಣ ಮಾಸದ ಅಂಗವಾಗಿ ನಗರದ ಸೇಡಂ ರಸ್ತೆ ವಿದ್ಯಾನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಂಡಿರುವ ಮಹಾತ್ಮಾ ಚರಬಸವೇಶ್ವರ ಪುರಾಣ ಮಂಗಲೋತ್ಸವ ಕಾರ್ಯಕ್ರಮ ಸೆ.೩ ರಂದು ಬೆಳಗ್ಗೆ ೧೦-೩೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಯಡ್ರಾಮಿ ಶ್ರೀ ಮುರುಘೇಂದ್ರ ಶಿವಯೋಗಿ ವಿರಕ್ತ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮಿಜಿ ವಹಿಸುವರು. ವಿದ್ಯಾನಗರ ವೆಲ್‌ಫೇರ್ ಸೊಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ, ಕಾರ್ಯದರ್ಶಿ ಶಿವರಾಜ ಅಂಡಗಿ, ಖಜಾಂಚಿ ಗುರುಲಿಂಗಯ್ಯ ಮಠಪತಿ, ಹಿರಿಯರಾದ ಸೋಮಶೇಖರಯ್ಯ ಹೊಸಮಠ, ಬಸಯ್ಯ ಹಿರೇಮಠ ಇತರರು ಪೂಜ್ಯರಿಗೆ ಭೇಟಿ ಮಾಡಿ ಆಹ್ವಾನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net