ಪೂರ್ಣ ಮಾಹಿತಿಯೊಂದಿಗೆ ಬನ್ನಿ

05ydg03
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಡಿಸಿ ಡಾ.ಸುಶೀಲಾ ಮಾತನಾಡಿದರು. ಜಿಪಂ ಸಿಇಒ ಗರೀಮಾ ಪನ್ವಾರ್, ಎಸ್‌ಪಿ ಜಿ.ಸಂಗೀತಾ ಇದ್ದರು.
Published on

ಯಾದಗಿರಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಸಂಪೂರ್ಣ ಮಾಹಿತಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ ನೀಡಿದ್ದಾರೆ.

ಡಿಸಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ನ.೧೮ರಿಂದ ಮೂರು ದಿನ ಉಪ ಲೋಕಾಯುಕ್ತರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸುವುದರ ಜತೆಗೆ ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು, ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸಲಿದ್ದಾರೆ. ಹೀಗಾಗಿ ತಮ್ಮ ಕಚೇರಿಗಳಲ್ಲಿ ಬಾಕಿ ಇರುವ ಎಲ್ಲ ಕಡತ, ಜನರಿಂದ ಸ್ವೀಕೃತಗೊಂಡ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಅಲ್ಲದೆ ಅಗತ್ಯ ಪೂರ್ವ ಸಿದ್ಧತೆಯೊಂದಿಗೆ ಹಾಜರಿರುವಂತೆ ನಿರ್ದೇಶನ ನೀಡಿದರು.


ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರೀಮಾ ಪನ್ವಾರ್, ಜಿ¯್ಲÁ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಉಪ ಕಾರ್ಯದರ್ಶಿ ಶರಣ ಬಸವರಾಜ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net