26ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ವಶ

ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ
Published on: 

ಗುರುಮಠಕಲ್: ತಾಲೂಕಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಣೆಯಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ 26 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಗುರುಮಠಕಲ್-ಗಾಜರಕೋಟ್ ಮುಖ್ಯ ರಸ್ತೆಯ ಬದಿಯಲ್ಲಿ ವಾಹನವೊಂದರಲ್ಲಿ ಪಡಿತರ ಅಕ್ಕಿ ಲೋಡ್ ಮಾಡಿ ನಿಲ್ಲಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 26 ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದ್ದು, ಅಂದಾಜು 60 ಸಾವಿರ ರೂ. ಮೌಲ್ಯ ಎಂದು ಹೇಳಲಾಗಿದೆ. ವಾಹನ ಚಾಲಕನ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net