ಆರ್ಥಿಕ ದಿವಾಳಿಯತ್ತ ಕಾಂಗ್ರೆಸ್​ ಸರ್ಕಾರ

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ಯಾದಗಿರಿಯಲ್ಲಿ ಶುಕ್ರವಾರ ಅಣಕು ಶವಯಾತ್ರೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಇತರರಿದ್ದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ಯಾದಗಿರಿಯಲ್ಲಿ ಶುಕ್ರವಾರ ಅಣಕು ಶವಯಾತ್ರೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ, ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಇತರರಿದ್ದರು.
Published on: 

ಯಾದಗಿರಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ನಗರದ ಸುಭಾಷ ವೃತ್ತದಲ್ಲಿ ಶುಕ್ರವಾರ ಅಣಕು ಶವಯಾತ್ರೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ,ಅಣುಕು ಶವಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಮಾತನಾಡಿ, ರಾಜ್ಯದ ಕಾಂಗ್ರೆಸ್​ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲವಾಗಿದ್ದು, ಬಡವರು, ರೈತರು, ಮಹಿಳೆಯರು ಹಾಗೂ ಯುವಕರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಸರ್ಕಾರ ಗರಿಷ್ಠ ಪ್ರಮಾಣದಲ್ಲಿ ಸಾಲ ಮಾಡಿದ್ದರೂ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ರಾಜ್ಯದ ಹಣಕಾಸಿನ ವಾಸ್ತವಿಕ ಸ್ಥಿತಿಯನ್ನು ಜನರ ಮುಂದಿಡಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ್​ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರ ಮೂಲಭೂತ ಸಮಸ್ಯೆಗೆ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ. ಬಡವರು ಮತ್ತು ರೈತರಿಗೆ ಸರ್ಕಾರದ ವಿವಿಧ ಯೋಜನೆಗಳ ಹಣ ಸಮಯಕ್ಕೆ ಸರಿಯಾಗಿ ತಲುಪುತ್ತಿಲ್ಲ. ಸರ್ಕಾರದ ಹಣಕಾಸಿನ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ಪಷ್ಟ ಮಾಹಿತಿ ಜನರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಗೌಡ ಮುದ್ನಾಳ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕ ಅನುದಾನ ನೀಡಲಾಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿವೆ. ಬಡವರ ಸಾಮಾಜಿಕ ಭದ್ರತಾ ಯೋಜನೆಗಳು, ವಿದ್ಯಾರ್ಥಿಗಳ ಸೌಲಭ್ಯಗಳು ಹಾಗೂ ಯುವಕರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜ್ಯದ ಹಣಕಾಸಿನ ಸ್ಥಿತಿಗತಿ ಕುರಿತು ಸರ್ಕಾರ ಪಾರದರ್ಶಕವಾಗಿ ಮಾಹಿತಿ ನೀಡಬೇಕು. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಅನುದಾನ ಒದಗಿಸುವ ಜತೆಗೆ, ಬಡವರು ಮತ್ತು ರೈತರ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಜಾಕ, ವಿವಿಧ ಘಟಕಗಳ ಪದಾಧಿಕಾರಿ ಮತ್ತು ಮುಖಂಡರಾದ ಪ್ರಭಾವತಿ ಕಲಾಲ್​, ವೆಂಕಟಪ್ಪ ಅವಂಗಾಪುರ, ನರಸಿಂಹಲು ನಿರೇಟಿ, ಬಸವರಾಜ ಸೋನದ, ಶಿವರಾಜ್​ ದೇಶಮುಖ, ಸಿದ್ದನಗೌಡ ವಡಗೇರಿ, ರಾಜಶೇಖರ ಕಾಡಮನೂರು, ಮಲ್ಲಿಕಾರ್ಜುನ ಕಟ್ಟಿಮನಿ, ರಮೇಶ ದೊಡ್ಡಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net