

ಯಾದಗಿರಿ: ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಸತಿ ನಿಲಯದಲ್ಲಿರುವ ಕ್ರೀಡಾಪಟು ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಮಾಲೋಚನೆ ನಡೆಸಿ, ಅವರ ಶೈಕ್ಷಣಿಕ ಪ್ರಗತಿ, ಕ್ರೀಡಾ ತರಬೇತಿ, ವಸತಿ, ಆಹಾರ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.