ಪ್ರಾಥಮಿಕ ಹಂತದಲ್ಲಿಯೇ ಮಕ್ಕಳನ್ನು ಕ್ರೀಡೆಗಳಿಗೆ ಪ್ರೋತ್ಸಾಹಿಸಿ: ಕ್ರೀಡಾಧಿಕಾರಿ ರಾಜೂ ಬಾವಿಹಳ್ಳಿ ಕರೆ.

ಪ್ರಾಥಮಿಕ ಹಂತದಲ್ಲಿಯೇ ಮಕ್ಕಳನ್ನು ಕ್ರೀಡೆಗಳಿಗೆ ಪ್ರೋತ್ಸಾಹಿಸಿ: ಕ್ರೀಡಾಧಿಕಾರಿ ರಾಜೂ ಬಾವಿಹಳ್ಳಿ ಕರೆ.
Published on: 

ಯಾದಗಿರಿ: ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಹೇಳಿದರು.

ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರದಲ್ಲಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ

2026-27ನೇ ಸಾಲಿನ ತಾಲೂಕು ಮಟ್ಟದ ದಸರಾ ಸಿ.ಎಸ್.ಕಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಗಳು ಮನುಷ್ಯನ ಆರೋಗ್ಯಕ್ಕೆ ಉತ್ತಮ ಫಲ ನೀಡುತ್ತವೆ.ದೈಹಿಕ,ಮಾನಸಿಕವಾಗಿ ಗಟ್ಟಿಗೊಳ್ಳುತ್ತಾನೆ ಎಂದರು.

ಇಲ್ಲಿ ಆಟ ಆಡಿದ ಮಕ್ಕಳು ಜಯಶಾಲಿಗಳಾಗಿ ವಿಭಾಗ, ರಾಜ್ಯಮಟ್ಟದಲ್ಲಿ ಮಿಂಚಿಲಿ ಎಂದರು.

ಅತಿಥಿಗಳಾಗಿ

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರುದ್ರಗೌಡ ಅವರು, ಗಿರಿಜಿಲ್ಲೆಯಲ್ಲಿ ಅನೇಕ ಉತ್ತಮ ಪ್ರತಿಭೆಗಳಿವೆ, ಅವರುಗಳಿಗೆ ಪ್ರೋತ್ಸಾಹ ನೀಡಿ ಬೆಳೆಸಬೇಕೆಂದರು.

ಮುಖ್ಯ ಅತಿಥಿಗಳಾಗಿ ಪ್ರವಾಸೋಧ್ಯಮ ಇಲಾಖೆ ಸಹಾಯಕ ನಿರ್ದೆಶಕ ರಾಮಚಂದ್ರ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶ್ಯಾಮುವೆಲ್, ಗ್ರೇಡ್ -1ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮೌನೇಶ ಗೋನಾಲ ಅವರುಗಳು ಮಾತನಾಡಿದರು.

ಇದೇ ವೇಳೆ ಕ್ರೀಡಾ ಜ್ಯೋತಿಗೆ ಸ್ವಾಗತಿಸಲಾಯಿತು.ಕ್ರೀಡಾ ಪ್ರಮಾಣ ವಚನ ಬೋದಿಸಲಾಯಿತು. ಕ್ರೀಡಾ ಧ್ವಜಾರೋಹಣ ನೆರವೇರಿಸಲಾಯಿತು. ತಿರುಪತಿ ವೈದ್ಯ ಪ್ರಾರ್ಥಿಸಿದರು. ಕ್ರೀಡಾಕೂಟದಲ್ಲಿ 400 ಅಧಿಕ ಮಕ್ಕಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net