ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ರಾಹುಲ್​ ಪಾಂಡ್ವೆ
ರಾಹುಲ್​ ಪಾಂಡ್ವೆ
Published on

ಯಾದಗಿರಿ: ಜಿಲ್ಲೆಯಲ್ಲಿ ನಕಲಿ ಆಸ್ಪತ್ರೆ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸುವ ಜತೆಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಾಹುಲ್​ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪಿಸಿ, ಪಿಎನ್​ಡಿಟಿ, ಎಂಟಿಪಿ ಹಾಗೂ ತಂಬಾಕು ನಿಯಂತ್ರಣ ಕೋಶದ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಅನಧಿಕೃತ, ನೊಂದಾಯಿತ ಅಲ್ಲದ ಮತ್ತು ನಿಗದಿತ ವಿದ್ಯಾರ್ಹತೆ ಇಲ್ಲದ ನಕಲಿ ವೈದ್ಯರಿಂದ ನಡೆಸಲ್ಪಡುವ ಆಸ್ಪತ್ರೆಗಳ ಮೇಲೆ ನಿರ್ದಾಣ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೆಪಿಎಂಇ ಕಾಯ್ದೆಯಡಿ ಆಸ್ಪತ್ರೆಗಳು ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಈವರೆಗೆ ನಕಲಿ ವೈದ್ಯರ ವಿರುದ್ಧ ಎಫ್​ಐಆರ್​ ಆಗಿದ್ದರೂ ಕಾನೂನು ಕ್ರಮ ಆಗದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪೋಲಿಸ್​ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಸೂಕ್ತ ಕ್ರಮ ಆಗುವಂತೆ ನೋಡಿಕೊಳ್ಳಬೇಕು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆ ಕಾರ್ಯವೈಖರಿ ಮೇಲೆ ತೀವ್ರ ನಿಗಾ ಇಡಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೋಲಿಸ್​ ವರಿಷ್ಠಾಧಿಕಾರಿ ಧರಣೇಶ್​, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರಾದಾರ, ಜಿಲ್ಲಾ ಸರ್ವೇಣಾಧಿಕಾರಿ ಡಾ.ಎಂ.ಎಸ್​.ಪಾಟೀಲ್​, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಜ್ಯೋತಿ ಕಟ್ಟಿಮನಿ ಇತರರಿದ್ದರು.

ಜಿಲ್ಲೆಯಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ಶಿಕ್ಷಕರು ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸಿ, 1241ಶಾಲೆ ಹಾಗೂ 68 ಕಾಲೇಜುಗಳನ್ನು ತಂಬಾಕುಮುಕ್ತ ಶೈಣಿಕ ಸಂಸ್ಥೆಗಳನ್ನಾಗಿ ೂಷಿಸಲಾಗಿದೆ ಎಂದು ಸಭೆಗೆ ಅವರು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net