

ಯಾದಗಿರಿ: ಸಮಾಜದಲ್ಲಿ ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯ ಹೆಚ್ಚಿಸುವ ಹಾಗೂ ಭ್ರಷ್ಟಾಚಾರಮುಕ್ತ ಆಡಳಿತಕ್ಕೆ ಒತ್ತು ನೀಡುವ ಉದ್ದೇಶದಿಂದ ವಿಭಾಗೀಯ ಅಂಚೆ ಕಚೇರಿ ಹಾಗೂ ಉಪವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿ ಸಹಭಾಗಿತ್ವದಲ್ಲಿ ಸಮೃದ್ಧಿಗಾಗಿ ಪ್ರಾಮಾಣಿಕತೆ ಎಂಬ ೂಷವಾಕ್ಯದಡಿ ಜಾಗೃತಿ ಪಾದಯಾತ್ರೆ (ಜಾಥಾ) ಕಾರ್ಯಕ್ರಮ ಬುಧವಾರ ನಡೆಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿರುವ ವಿಭಾಗೀಯ ಅಂಚೆ ಕಚೇರಿಯಿಂದ ಆರಂಭವಾದ ಈ ಪಾದಯಾತ್ರೆ ಬಾಬು ಜಗಜೀವನ ರಾಮ್ ವೃತ್ತದವರೆಗೆ ಸಾಗಿ, ಇಲಾಖೆ ನೌಕರರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ವಿಭಾಗದ ಸಹಾಯಕ ಅಂಚೆ ಅಧೀಕ ಕೃಷ್ಣ ಮೋಹಿತೆ,ಪ್ರಾಮಾಣಿಕತೆ, ನೈತಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯು ವೈಯಕ್ತಿಕ ಹಾಗೂ ಸಾಮಾಜಿಕ ಸಮೃದ್ಧಿಗೆ ಮುಖ್ಯ ಅಡಿಪಾಯವಾಗಿದೆ. ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ನಿರ್ವಹಿಸಿದಾಗ ಮಾತ್ರ ಭ್ರಷ್ಟಾಚಾರಮುಕ್ತ ಸಮಾಜ ಹಾಗೂ ಉತ್ತಮ ಆಡಳಿತ ನಿರ್ಮಾಣ ಸಾಧ್ಯ ಎಂದರು.
ಸರ್ಕಾರಿ ನೌಕರರು ತಮ್ಮ ದೈನಂದಿನ ಕರ್ತವ್ಯದಲ್ಲಿ ನೈತಿಕ ಮೌಲ್ಯ ಅಳವಡಿಸಿಕೊಳ್ಳುವುದು, ಸಾರ್ವಜನಿಕರೊಂದಿಗೆ ಪಾರದರ್ಶಕವಾಗಿ ವ್ಯವಹರಿಸುವುದು, ಸರ್ಕಾರಿ ಸಂಪನ್ಮೂಲಗಳನ್ನು ಜವಾಬ್ದಾರಿಯುತವಾಗಿ ಬಳಸುವುದು ಹಾಗೂ ಭ್ರಷ್ಟಾಚಾರ ತಡೆಗಟ್ಟಲು ಬದ್ಧರಾಗಿರುವುದು ಅತ್ಯಂತ ಅಗತ್ಯ ಎಂದು ಹೇಳಿದರು.
ಪ್ರಾಮಾಣಿಕತೆಯು ಕೇವಲ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗಿರದೆ, ಸಮಾಜದ ಪ್ರತಿಯೊಬ್ಬ ನಾಗರಿಕನ ಜೀವನದಲ್ಲೂ ಮುಖ್ಯ ಪಾತ್ರ ವಹಿಸುತ್ತದೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಪ್ರಾಮಾಣಿಕತೆ ಪಾಲಿಸುವುದರಿಂದ ಸಾರ್ವಜನಿಕ ಸೇವೆಗಳ ಗುಣಮಟ್ಟ ಹಾಗೂ ಆಡಳಿತ ವ್ಯವಸ್ಥೆ ಮೇಲಿನ ವಿಶ್ವಾಸ ಹೆಚ್ಚುತ್ತದೆ ಎಂಬ ಸಂದೇಶವನ್ನು ಜಾಥಾದ ಉದ್ದಕ್ಕೂ ಸಾರಲಾಯಿತು.
ಈ ಜಾಗೃತಿ ಕಾರ್ಯಕ್ರಮದಲ್ಲಿ ಸಹಾಯಕ ಅಂಚೆ ಅಧೀಕ ಲ್ಮಕಾಂತ ಕೋಡ್ಲಿ, ಯಾದಗಿರಿ ಪೋಸ್ಟ್ ಮಾಸ್ಟರ್ ವೀರಣ್ಣ ಪತ್ತಾರ್ ಸಿಬ್ಬಂದಿ ಚಂದ್ರಕಲಾ, ದತ್ತಾತ್ರಿ, ಮಲ್ಲಿಕಾರ್ಜುನ ಸೇರಿ ವಿಭಾಗೀಯ ಹಾಗೂ ಉಪವಿಭಾಗೀಯ ಅಂಚೆ ಕಚೇರಿ ಎಲ್ಲ ಸಿಬ್ಬಂದಿ ಭಾಗವಹಿಸಿದ್ದರು.