ಭಾರಿ ಮಳೆಗೆ ಕುಸಿದ ಮನೆ

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕೆ.ಆರ್.ಪೇಟೆ ತಾಲೂಕಿನ ದೊಡ್ಡಹಾರನಹಳ್ಳಿಯಲ್ಲಿ ಮಳೆಯಿಂದ ಕುಸಿದ ಮನೆ.
ಕೆ.ಆರ್.ಪೇಟೆ ತಾಲೂಕಿನ ದೊಡ್ಡಹಾರನಹಳ್ಳಿಯಲ್ಲಿ ಮಳೆಯಿಂದ ಕುಸಿದ ಮನೆ.
Published on: 

ಕೆ.ಆರ್.ಪೇಟೆ: ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ದೊಡ್ಡಹಾರನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಸಂತಮ್ಮ ಅವರಿಗೆ ಸೇರಿದ ಮನೆ ಕುಸಿದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೊಟ್ಟಿಗೆಯಲ್ಲಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ. ಈಗಾಗಲೇ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿದ್ದು, ಇದೀಗ ಮನೆ ಕುಸಿದು ಸಂಕಷ್ಟ ಎದುರಾಗಿದೆ. ತಾಲೂಕು ಆಡಳಿತ ಪ್ರಕೃತಿ ವಿಕೋಪದಡಿ ಪರಿಹಾರ ನೀಡಬೇಕು ಎಂದು ವಸಂತಮ್ಮ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net