ಒಂದೆರೆಡು ದಿನಗಳಲ್ಲಿ ಬಂಡಾಯ ಶಮನ

new bsy new
Published on

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವೆಡೆ ಉದ್ಭವಿಸಿರುವ ಬಂಡಾಯವನ್ನು ಒಂದೆರೆಡು ದಿನಗಳಲ್ಲಿ ಶಮನಗೊಳಿಸಲಾಗುವುದು. ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಖಚಿತ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 25 ರಿಂದ 26 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಹಾಗೂ ಮಹಿಳಾ ಮತದಾನ ಹೆಚ್ಚಾಗಲು ಗಮನ ನೀಡುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದರು.

ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಮುಖಂಡರು ಚುನಾವಣಾ ಪ್ರವಾಸ ಆರಂಭಿಸಲಿದ್ದಾರೆ. ರಾಷ್ಟ್ರೀಯ ಮುಖಂಡರು ಚುನಾವಣೆ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಈ ಬಾರಿ ಎನ್​ಡಿಎ ಮೈತ್ರಿ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net