ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅತ್ತಿಗೆ ನಿಧನ

BSY
Published on

ಮಂಡ್ಯ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅತ್ತಿಗೆ ಶಾರದಮ್ಮ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ವಾಸವಾಗಿದ್ದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಇಂದು ಲಿಂಗಾಯಿತ ವಿಧಿ ವಿಧಾನಗಳ ರೀತಿ ಅಂತ್ಯಕ್ರಿಯೆ ನಡೆಯಲಿದೆ. ಬೂಕನಕೆರೆಯಲ್ಲಿ ನಡೆಯುವ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಲಾಗಿದೆ. ಯಡಿಯೂರಪ್ಪನವರು ಈ ನಿಮಿತ್ತ ಬೂಕನಕೆರೆಗೆ ಆಗಮಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net