ಯಡ್ತರೆ ಮಂಜಯ್ಯ ಶೆಟ್ಟಿ ಸೇವೆ ಅನನ್ಯ

10gan2
Published on

ಕುಂದಾಪುರ: ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಇರುವ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೂ ಒಳ್ಳೆಯ ಶಿಕ್ಷಣಾವಕಾಶ ದೊರೆತು, ಅವರು ವಿದ್ಯಾವಂತರಾಗಿ, ಸವಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಮಹದಾಸೆಯನ್ನು ಹೊಂದಿದ್ದ ಆದರ್ಶ ರಾಜಕಾರಣಿ ಯಡ್ತರೆ ಮಂಜಯ್ಯ ಶೆಟ್ಟಿಯವರು ಶಾಸಕರಾಗಿದ್ದ ಕಾಲದಲ್ಲಿ ಆರಂಭವಾಗಿದ್ದ ವಂಡ್ಸೆಯ ಮಲ್ನಾಡ್ ಹೈಸ್ಕೂಲ್ ಶಿಕ್ಷಣಾಸಕ್ತ ಮನಸ್ಸುಗಳಿಗೂ ದೇವಾಲಯವಿದ್ದಂತೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

ಕುಂದಾಪುರ ತಾಲೂಕಿನ ವಂಡ್ಸೆನೆಂಪುವಿನ ಕೆಪಿಎಸ್ ಸ್ಕೂಲ್ ಆವರಣದಲ್ಲಿ ಅಂದಾಜು 1.25 ಕೋಟಿ ರೂ. ವೆಚ್ಚದಲ್ಲಿ ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳು ನಿರ್ಮಿಸಿಕೊಟ್ಟ ಹೊಳ್ಮಗೆ ವಿನೋದಾ ರವಿ ಶೆಟ್ಟಿ ಸಾಂಸ್ಕೃತಿಕ ರಂಗ ಮಂದಿರ ‘ಐಕ್ಯಮ್’ ಲೋಕಾರ್ಪಣೆ ಹಾಗೂ ವಾಜಿ ಶಾಸಕ ಯಡ್ತರೆ ಮಂಜಯ್ಯ ಶೆಟ್ಟಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಾತನಾಡಿ, ಪತ್ನಿ ಕಲಿತ ಶಾಲೆಯ ಅಭ್ಯುದಯಕ್ಕಾಗಿ 75 ಲಕ್ಷದ ದೊಡ್ಡ ಕೊಡುಗೆಯನ್ನು ನೀಡಿ, ಪತ್ನಿಯ ಹೆಸರನ್ನು ಶಾಶ್ವತವಾಗಿಸುವ ಜೊತೆಯಲ್ಲಿ ಸವಾಜದ ಋಣ ತೀರಿಸುವ ಡಾ.ರವೀಂದ್ರನಾಥ ಶೆಟ್ಟಿ ಅವರ ಕೊಡುಗೆ ಅನನ್ಯವಾದುದು ಎಂದರು. ಕಟ್ಟಡ ನಿರ್ಮಾಣಕ್ಕೆ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕಕುರ್ಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೀವ ಶೆಟ್ಟಿ ಬಿಜ್ರಿ, ಕುಂದಾಪುರ ರೆಡ್‌ಕ್ರಾಸ್ ಟಕ ಅಧ್ಯಕ್ಷ ಎಸ್.ಜಯಕರ ಶೆಟ್ಟಿ, ಉದ್ಯಮಿ ಅಶೋಕ ಕುವಾರ ಶೆಟ್ಟಿ ಕುಂದಾಪುರ, ಬೈಂದೂರು ವಲಯ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ, ಕೆಪಿಎಸ್ ಸ್ಕೂಲ್ ಪ್ರಾಂಶುಪಾಲ ಕೃಷ್ಣರಾಜ್ ಭಟ್, ಹಳೆ ವಿದ್ಯಾರ್ಥಿ ಸಂ ಗೌರವಾಧ್ಯಕ್ಷ ಕೆ.ನಾರಾಯಣ ಶೆಟ್ಟಿ, ಅಧ್ಯಕ್ಷ ಎನ್.ಸಂತೋಷ್ ಕುವಾರ ಶೆಟ್ಟಿ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಚಿತ್ತೂರು ಸ್ವಾಗತಿಸಿ, ಮುಖ್ಯ ಶಿಕ್ಷಕ ಶ್ರೀಧರ ಭಟ್ ವಂದಿಸಿದರು. ಕಟ್ಟಡ ನಿರ್ವಾಣ ಸಮಿತಿ ಅಧ್ಯಕ್ಷ ಬಿ.ಎನ್.ಶೆಟ್ಟಿ ಪ್ರಸ್ತಾವನೆಗೈದರು. ಶಿಕ್ಷಕ ವಸಂತ್‌ರಾಜ್ ಶೆಟ್ಟಿ ವಂಡ್ಸೆ ಸನ್ಮಾನ ಪತ್ರ ಓದಿದರು, ಡಾ.ಕಿಶೋರಕುವಾರ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net