ಮಕ್ಕಳಿಗೆ ಸ್ವೆಟರ್ ವಿತರಿಸಿದ ಯದುವೀರ್

yaduveer
Published on

ಕುಶಾಲನಗರ:

ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸುವ ಕೆಲಸ ಮಾಡಬೇಕಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಇಲ್ಲಿನ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಸ್ವೆಟರ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಮಕ್ಕಳಿಗೆ ಸೌಲಭ್ಯ ಕೊಡಲು ಗಮಹರಿಸಲಾಗುವುದು. ಮಕ್ಕಳೇ ದೇಶದ ಭವಿಷ್ಯ. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ ರೂಪಿಸುವ ಕೆಲಸ ಆಗಬೇಕು. ಮೂಲ ಸೌಕರ್ಯ ಒದಗಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಮಕ್ಕಳು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಚಳಿಗಾಲ ಮತ್ತು ಮಳೆಗಾಲದಲ್ಲಿ ಬೆಚ್ಚಗೆ ಇರಬೇಕು. ಈ ಕಾರಣಕ್ಕೆ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಯ ಮಕ್ಕಳಿಗೆ ಒಟ್ಟು 30 ಸಾವಿರ ಸ್ವೆಟರ್ ವಿತರಿಸಲಾಗುತ್ತಿದೆ. ತಾವು ಮತ್ತು ಸಂಸದ ಯದುವೀರ್ ದಾನಿಗಳ ನೆರವಿನಿಂದ ಈ ಕೆಲಸ ಮಾಡುತ್ತಿದ್ದು, ವಿರಾಜಪೇಟೆ ತಾಲೂಕಿಗೆ 9 ಸಾವಿರ, ಮಡಿಕೇರಿ ತಾಲೂಕಿಗೆ 8 ಸಾವಿರ ಸ್ವೆಟರ್‌ಗಳನ್ನು ಕೊಡಲಾಗಿದೆ. ಉಳಿದ ಎಲ್ಲಾ ಸ್ವೆಟರ್‌ಗಳನ್ನು ಅವಿಭಜಿತ ಸೋಮವಾರಪೇಟೆ ತಾಲೂಕಿಗೆ ಒದಗಿಸಲಾಗುತ್ತಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರ ಬಿಜೆಪಿ ಅಧ್ಯಕ್ಷ ಎಂ.ಎA. ಚರಣ್, ಪುರಸಭೆ ಮಾಜಿ ಅಧ್ಯಕ್ಷ ಜೈವರ್ಧನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದನ್ ಕುಮಾರ್, ಮುಖ್ಯೋಪಾಧ್ಯಾಯಿನಿ ಭಾರತಿ ಮತ್ತಿತರರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net