ಹೆದ್ದಾರಿ ವಾಲ್ ಪರಿಶೀಲಿಸಿದ ಯದುವೀರ್

20
Published on

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಕೆಲವು ಸುರಕ್ಷತಾ ಕಾಳಜಿಗಳಿರುವ ಎರಡು ಆರ್‌ಇ ವಾಲ್ಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರಿಶೀಲಿಸಿದರು.

ಅಧಿಕಾರಿಗಳ ತಂಡದೊಂದಿಗೆ ಇಂಡುವಾಳ ಮತ್ತು ಬೂದನೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಆರ್‌ಇ ವಾಲ್‌ನ ಅಗತ್ಯ ನಿರ್ವಹಣಾ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದರು.

ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಹಾಗೂ ನಿರ್ವಹಣಾ ಕಾಮಗಾರಿಗೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ಕೆಲವು ರಸ್ತೆ ಚರಂಡಿಗಳ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿದ್ದು, ಕೂಡಲೇ ಈ ಬಗ್ಗೆ ಗಮನಹರಿಸುವಂತೆ ನಿರ್ದೇಶನ ನೀಡಿದರು.

ಜನರಿಗೆ ಉಡುಗೊರೆಯಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೈಸೂರು-ಬೆಂಗಳೂರು ಪ್ರಮುಖ ಯೋಜನೆ ನೀಡಿದೆ. ರಸ್ತೆಯ ಸುರಕ್ಷತೆಯ ಕಾಳಜಿಯನ್ನು ಖಾತ್ರಿಪಡಿಸುವುದು ಅತ್ಯಂತ ಆದ್ಯತೆಯಾಗಿದ್ದು, ಈ ಕುರಿತು ಅಧಿಕಾರಿಗಳಿಗೆ ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net