

ಮಡಿಕೇರಿ:
ಸಂಸದರಾಗಿ ಆಯ್ಕೆ ಆದ ನಂತರ ಇದೇ ಮೊದಲ ಬಾರಿಗೆ ಕೊಡಗಿಗೆ ಆಗಮಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಶ್ರೀ ಕ್ಷೇತ್ರ ಭಾಗಮಂಡಲ ಮತ್ತು ಮಾತೆ ಕಾವೇರಿ ಉಗಮಸ್ಥಾನ ತಲಕಾವೇರಿಗೆ ಭೇಟಿ ನೀಡಿದ್ದರು. ಭಾಗಮಂಡಲದಲ್ಲಿ ತ್ರಿವೇಣಿ ಸಂಗಮಕ್ಕೆ ನಮಿಸಿ ಭಗಂಡೇಶ್ವರ, ಸುಬ್ರಹ್ಮಣ್ಯ, ಮಹಾವಿಷ್ಣು ಹಾಗೂ ಮಹಾಗಣಪತಿಗೆ ಪೂಜೆ ಸಲ್ಲಿಸಿದರು. ನಂತರ ತಲಕಾವೇರಿಯಲ್ಲಿ ಮಾತೆ ಕಾವೇರಿ, ಅಗಸ್ತೆö್ಯÃಶ್ವರ, ಗಣಪತಿಗೆ ವಿಶೇಷ ಪೂಜೆ ನೆರವೇರಿಸಿ ಲೋಕಕಲ್ಯಾಣಾರ್ಥವಾಗಿ ಪ್ರಾರ್ಥನೆ ಸಲ್ಲಿಸಿದರು.
ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಲನ ರವಿ, ವಿಎಸ್‌ಎಸ್‌ಎನ್ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್, ಸ್ಥಳೀಯರಾದ ರವಿ ಹೆಬ್ಬಾರ್, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ ಮತ್ತಿತರರು ಈ ವೇಳೆ ಇದ್ದರು.