ಯದುವೀರ್ ರೋಡ್ ಶೋ

Yaduveer Road Show
Published on

ಮಡಿಕೇರಿ:

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಮಡಿಕೇರಿಯಲ್ಲಿ ರೋಡ್ ಶೋ ನಡೆಸುವ ಮೂಲಕ ಮತ ಯಾಚಿಸಿದರು. ಬನ್ನಿ ಮಂಟಪ ಬಳಿಯಿಂದ ಆರಂಭವಾದ ರೋಡ್ ಶೋ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಈ ವೇಳೆ ಇಲ್ಲಿನ ಇಂದಿರಾ ಗಾಂಧಿ ವೃತ್ತದಲ್ಲಿ ಮಾತನಾಡಿದ ಯದುವೀರ್, ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರದತ ಕನಸು ನನಸಾಗುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಿದೆ. ಬಿಜೆಪಿ ಭಾರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಎಲ್ಲರೂ ಮತದಾನ ಮಾಡಬೇಕು ಎಂದರು.

ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ ಪಕ್ಷದ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರ ಆಡಳಿತ ಬಲಪಡಿಸುವ ಪ್ರಯತ್ನ ಆಗಬೇಕು ಎಂದು ಹೇಳಿದರು. ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಮಾತನಾಡಿ, ಯದುವೀರ್ ಅವರ ಜತೆ ಕ್ಷೇತ್ರದಲ್ಲಿ ಸುತ್ತಾಡುವ ಸಂದರ್ಭ ಅವರಿಗೆ ವ್ಯಾಪಕ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಕಂಡು ಬಂದಿದೆ. ಯದುವೀರ್ ಸುಶಿಕ್ಷಿತ ಅಭ್ಯರ್ಥಿಯಾಗಿದ್ದು, ಕ್ಷೇತ್ರದ ಜನತೆಗೆ ಸಕರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದರು.

ಎಂಎಲ್‌ಸಿ ಸುಜಾ ಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ ಸೇರಿದಂತೆ ಪಕ್ಷದ ಪ್ರಮುಖರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net