ವಿರಾಜಪೇಟೆಯಲ್ಲಿ ಯದುವೀರ್ ರೋಡ್ ಶೋ

Oplus_131072
ವಿರಾಜಪೇಟೆ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ರೋಡ್ ಶೋ ನಡೆಸಿದರು.
Published on

ವಿರಾಜಪೇಟೆ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ವಿರಾಜಪೇಟೆ ಪಟ್ಟಣದಲ್ಲಿ ಪಕ್ಷದ ಪ್ರಮುಖರು ಹಾಗೂ ಬೆಂಬಲಿಗರೊಂದಿಗೆ ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಿದರು.

ಪಟ್ಟಣದ ತೆಲುಗರ ಬೀದಿಯಲ್ಲಿನ ಮರಿಯಮ್ಮ ದೇವಾಲಯದಿಂದ ಜೈನರ ಬೀದಿ, ದೊಡ್ಡಟ್ಟಿ ಚೌಕಿ, ಎಫ್.ಎಂ.ಸಿ ರಸ್ತೆ, ಗಡಿಯಾರ ಕಂಬ, ಜನರಲ್ ತಿಮ್ಮಯ್ಯ ರಸ್ತೆ, ಖಾಸಗಿ ಬಸ್ ನಿಲ್ದಾಣದ ಗೋಣಿಕೊಪ್ಪಲು ರಸ್ತೆಯ ಮೂಲಕ ಪಟ್ಟಣದ ಕೆಎಸ್‌ಆರ್‌ಟಿಸಿ ನಿಲ್ದಾಣದ ವರೆಗೆ ರೋಡ್ ಶೋ ನಡೆಸಿ ಮತಯಾಚಿಸಿದರು. ರೋಡ್ ಶೋನಲ್ಲಿ ಬಿಜೆಪಿ ಪ್ರಮುಖರಾದ ಹಾಗೂ ಚಲನಚಿತ್ರ ನಟಿ ತಾರಾ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಚುನಾವಣಾ ಉಸ್ತುವಾರಿ ಪಳೆಯಂಡ ರಾಬಿನ್ ದೇವಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ತಾಲೂಕು ಅಧ್ಯಕ್ಷ ಸುವಿನ್ ಗಣಪತಿ, ನಗರ ಅಧ್ಯಕ್ಷ ಟಿ.ಪಿ.ಕೃಷ್ಣ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ರೋಡ್ ಶೋನಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು, ಸಾರ್ವಜನಿಕರು ರೋಡ್ ಶೋಗೆ ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net