ಇಂದು ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಯದುವೀರ್ ಭೇಟಿ

Published on

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ದೀಪಾವಳಿ ದೀವಟಿಗೆ ಉತ್ಸವದ ಅಂಗವಾಗಿ ಸಂಸದ ಯದುವೀರ ಒಡೆಯರ್ ಅ.21 ರಂದು ಆಗಮಿಸಿ ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಹತ್ತಲಿದ್ದಾರೆ.

ಮೊದಲ ಬಾರಿಗೆ ಬೆಟ್ಟವನ್ನು ಏರುತ್ತಿರುವ ಸಂಸದರೊಂದಿಗೆ ಗಾವಡಗೆರೆ ಮಠದ ಶ್ರೀ ನಟರಾಜ ಸ್ವಾಮೀಜಿ, ಬಿಜೆಪಿ ತಾಲೂಕು ಅಧ್ಯಕ್ಷ ರಾಜೇಂದ್ರ, ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು, ಮುಖಂಡರು ಹಾಗೂ ಯುವಕರು ಸಾಗಲಿದ್ದಾರೆ. ಬಳಿಕ ಬೆಟ್ಟದ ತಪ್ಪಲಿನಲ್ಲಿ ಕನ್ನಡ ಮಠದ ಶ್ರೀ ಚನ್ನಬಸವದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಅನ್ನದಾಸೋಹ ನಡೆಯಲಿದ್ದು, ಸಂಸದರು ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ತಾಲೂಕು ಘಟಕದ ಕಾರ್ಯದರ್ಶಿ ಎನ್.ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net