ಜಿಲ್ಲಾಧಿಕಾರಿಗೆ ಯದುವೀರ ನಾಮಪತ್ರ ಸಲ್ಲಿಕೆ

3
Published on

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಅವರ ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಸಾಥ್ ನೀಡಿದರು. ಮುಖಂಡರಾದ ರಘು ಮತ್ತು ಪ್ರದೀಪ್‌ಕುಮಾರ್ ಪಾಲ್ಗೊಂಡಿದ್ದರು.

ಶುಭ ಘಳಿಗೆ ಹಿನ್ನೆಲೆಯಲ್ಲಿ ಸೋಮವಾರ ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ರಾಜ್ಯ ಮಟ್ಟದ ನಾಯಕರು ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜ್ಯೋತಿಷಿಯೊಬ್ಬರು ನೀಡಿದ ಸಲಹೆಯಂತೆ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಗಿದೆ. ಇದಕ್ಕೂ ಮುನ್ನ ಅರಮನೆಯಲ್ಲಿ ವಿಶೇಷ ಪೂಜಾ ಕಾರ್ಯ ನಡೆಸಲಾಯಿತು.

ಬಿ ಫಾರ್ಮ್ ವಿತರಣೆ: ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ನಾಯಕರು ಅರಮನೆಗೆ ಭೇಟಿ ನೀಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಬಿ ಫಾರ್ಮ ಅನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net