3 ರಂದು ಯದುವೀರ ಅಧಿಕೃತ ನಾಮಪತ್ರ ಸಲ್ಲಿಕೆ

yaduveer1
Published on

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಏ.3ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದರು.

ಅಂದು ಬೆಳಗ್ಗೆ 10.30ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಅಲ್ಲಿಂದ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುತ್ತದೆ. ಈ ವೇಳೆ ಶಾಸಕರಾದ ಶ್ರೀವತ್ಸ, ಜಿ.ಡಿ.ಹರೀಶ್‌ಗೌಡ, ಮಾಜಿ ಸಚಿವರಾದ ಸಾ.ರಾ.ಮಹೇಶ್, ಎಸ್.ಎ.ರಾಮದಾಸ್, ಸಂಸದ ಪ್ರತಾಪ್ ಸಿಂಹ, ಮುಖಂಡರಾದ ಎಲ್.ನಾಗೇಂದ್ರ, ರಾಜೇಂದ್ರ ಸೇರಿದಂತೆ ರಾಜ್ಯ ಮಟ್ಟದ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಎರಡು ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net