

ಉಡುಪಿ : ಯಕ್ಷಗಾನದಂತಹ ಭಗವತ್ ಕಲೆಯನ್ನು ಉಳಿಸಿ ಬೆಳೆಸಬೇಕು ಎನ್ನುವ ಏಕೈಕ ಉದ್ದೇಶದಿಂದ ಯಕ್ಷ ಪಂಚಮಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಲೆಯ ಉಳಿವಿಗೆ ಕಲಾವಿದ, ಪ್ರೇಕ್ಷಕ ಕಾರಣನಾಗುವಂತೆ ಕಲಾರಾಧಕರ ಕೊಡುಗೆಯೂ ಅಗತ್ಯವಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಸೋಮವಾರ ಶ್ರೀಕೃಷ್ಣ ಮಠ, ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪವ ಪರಿಷದ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕತಿಕ ಪ್ರತಿಷ್ಠ್ಠಾನ ಸಹಕಾರದಲ್ಲಿ 4ನೇ ವರ್ಷದ "ಯಕ್ಷ ಪಂಚಮಿ ' ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು,
ಕಾರ್ಯಕ್ರಮವನ್ನು ಪರ್ಯಾಯ ಕೃಷ್ಣಾಪುರ ಮಠದ ದಿವಾನ ವರದರಾಜ ಭಟ್ ಉದ್ಘಾಟಿಸಿದರು. ಶ್ರೀಕ್ಷೇತ್ರ ಮೆಕ್ಕೆಕಟ್ಟು ಆಡಳಿತ ಮೊಕ್ತೇಸರ ಕಿಶನ್ ಹೆಗ್ಡೆ ಕೊಳ್ಕೆಬೈಲು, ರಂಗಸ್ಥಳ ಮಂಗಳೂರು ಅಧ್ಯಕ್ಷ ದಿನೇಶ್ ವಿ.ಪೈ, ಹಟ್ಟಿಯಂಗಡಿ ಮೇಳದ ಸಂಚಾಲಕ ವಕ್ವಾಡಿ ರಂಜಿತ್ ಶೆಟ್ಟಿ, ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.