

ಮೂಡುಬಿದಿರೆ: ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮಂಗಳೂರು ವತಿಯಿಂದ ಯಕ್ಷ ಧ್ರುವ-ಯಕ್ಷ ಶಿಕ್ಷಣ ಯಕ್ಷಗಾನ ಶಿಕ್ಷಣ ಅಭಿಯಾನ ಹಾಗೂ ಪ್ರಸ್ತುತ ಸಾಲಿನ ಯಕ್ಷಗಾನ ತರಬೇತಿ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಯಕ್ಷ ಧ್ರುವ ಪಟ್ಲ ಫೌಂಡೇಷನ್ ಮೂಡುಬಿದಿರೆ ಘಟಕದ ಗೌರವಾಧ್ಯಕ್ಷ, ಕೇಂದ್ರ ಸದಸ್ಯ ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕೆ.ಎಂ.ಎಫ್ ನಿರ್ದೇಶಕ ಕೆ.ಪಿ.ಸುಚರಿತ ಶೆಟ್ಟಿ, ಯಕ್ಷ ಧ್ರುವ ಪಟ್ಲ ಫೌಂಡೇಷನ್ ಮೂಡುಬಿದಿರೆ ಘಟಕದ ಅಧ್ಯಕ್ಷ ದಿವಾಕರ್ ಶೆಟ್ಟಿ ಖಂಡಿಗೆ, ಸಂಚಾಲಕ ರವಿ ಪ್ರಸಾದ್ ಕೆ.ಶೆಟ್ಟಿ, ಉಪಾಧ್ಯಕ್ಷ ಸದಾಶಿವ ರಾವ್ ನೆಲ್ಲಿಮಾರು, ಮುಖ್ಯಶಿಕ್ಷಕ ದಿನಕರ ಕುಂಭಾಶಿ, ಯಕ್ಷ ಗುರು ಅನ್ವಿತಾ ಕೆರೆಕಾಡು ಉಪಸ್ಥಿತರಿದ್ದರು. ದಿನಕರ ಕುಂಭಾಶಿ ಸ್ವಾಗತಿಸಿದರು. ಸಂಪತ್ ರಾಜ್ ವಂದಿಸಿದರು. ಸುಧಾಕರ ಪೊಸ್ರಾಲು ನಿರೂಪಿಸಿದರು.