ಸಂಸ್ಕೃತಿ ಪ್ರಸಾರ ಕಾರ್ಯದಲ್ಲಿ ಯಕ್ಷಗಾನದ ಪಾತ್ರ ಮಹತ್ತರ - ಡಾ.ಎಂ.ಬಿ.ಪುರಾಣಿಕ್ ಅಭಿಪ್ರಾಯ

kkkkkkk
Published on


ಮಂಗಳೂರು : ಭಾರತೀಯ ಧರ್ಮ, ಸಂಸ್ಕೃತಿಗಳ ಪ್ರಸಾರ ಕಾರ್ಯದಲ್ಲಿ ಯಕ್ಷಗಾನದ ಪಾತ್ರ ಮಹತ್ತರವಾದುದು. ಇವತ್ತು ಜನಸಾಮಾನ್ಯರ ಬಾಯಿಯಲ್ಲೂ ರಾಮಾಯಣ, ಮಹಾಭಾರತದ ಕಥೆಗಳು ಹರಿದಾಡುವುದಿದ್ದರೆ ಅದಕ್ಕೆ ಕಾರಣ ಯಕ್ಷಗಾನ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಹೇಳಿದರು.
ಶಾರದಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ವತಿಯಿಂದ ಲಕ್ಷ್ಮೀಶ ಕವಿಯ ಜೈಮಿನಿ ಭಾರತದ ಸೀತಾ ಪರಿತ್ಯಾಗ ಪ್ರಸಂಗದ ಗಾಯನ-ನೃತ್ಯ ಪ್ರಾತ್ಯಕ್ಷಿಕೆ ಯಕ್ಷ ರಸಾಯನ ಕಾರ್ಯಕ್ರಮದ ಅಂಗವಾಗಿ ಕಲಾವಿದರಿಗೆ ಗೌರವಾರ್ಪಣೆ ಸಲ್ಲಿಸಿ ಅವರು ಮಾತನಾಡಿದರು.’
ಮುಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರಾದ ಸರ್ಪಂಗಳ ಈಶ್ವರ ಭಟ್ , ಡಾ. ಶ್ರುತಕೀರ್ತಿ ರಾಜ, ಡಾ.ಮಹೇಶ್ ಹಾಗೂ ವಿದ್ಯಾರ್ಥಿ ಯಕ್ಷ್ ಪಾತ್ರ ನಿರ್ವಹಿಸಿದ್ದರು. ಭಾಗವತಿಕೆಯಲ್ಲಿ ಶಾಲಿನಿ ಹೆಬ್ಬಾರ್, ಚೆಂಡೆಯಲ್ಲಿ ಮುರಾರಿ ಕಡಂಬಳಿತ್ತಾಯ, ಮದ್ದಳೆಯಲ್ಲಿ ವಿದ್ಯಾರ್ಥಿ ವರುಣ್ ಹೆಬ್ಬಾರ್ ಭಾಗವಹಿಸಿದ್ದರು.
ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರದೀಪ ಕುಮಾರ ಕಲ್ಕೂರ, ನಿರ್ದೇಶಕ ಸಮೀರ್ ಪುರಾಣಿಕ್, ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹಾಬಲೇಶ್ವರ ಭಟ್ ಎಸ್, ಉಪ ಪ್ರಾಂಶುಪಾಲ ಪ್ರಕಾಶ್ ನಾಯ್ಕ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಸತ್ಯಮೂರ್ತಿ ಕೆ. ಎಂ., ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಯಶೋದಾ ಕುಮಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net