ಅರ್ಹ ಸಾಧಕರಿಗೆ ಪ್ರಶಸ್ತಿ ಪ್ರದಾನ

yashaswi
ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆಯ ಶ್ವೇತಯಾನ-76 ಕಾರ್ಯಕ್ರಮದಡಿ ವಿದ್ವಾನ್ ಗಣಪತಿ ಭಟ್ ಹಾಗೂ ಸುಜಯೀಂದ್ರ ಹಂದೆ ಕೋಟ ಅವರನ್ನು ಅಭಿನಂದಿಸಲಾಯಿತು.
Published on

ಕೋಟ: ನಿರಂತರವಾಗಿ ಯಕ್ಷಗಾನ ಚಿಂತನೆಯಲ್ಲಿರುವ ಸಾಧಕರಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ. ಇಪ್ಪತ್ತೈದು ವರ್ಷ ನೆಲೆ ಕಂಡುಕೊಂಡು 108 ಕಾರ್ಯಕ್ರಮ ಹಮ್ಮಿಕೊಂಡ ಯಶಸ್ವೀ ಕಲಾವೃಂದಕ್ಕೆ ಸರ್ವರೂ ನೆರವಾಗಬೇಕು. ಅನೇಕ ಮಕ್ಕಳನ್ನು ರಂಗಕ್ಕೆ ತಂದ ಸಂಸ್ಥೆಯನ್ನು ಸರ್ಕಾರವೂ ಗುರುತಿಸಬೇಕು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆಯ ಶ್ವೇತಯಾನ-76 ಕಾರ್ಯಕ್ರಮದಡಿ ಗುರುವಾರ ಯಕ್ಷಗಾನ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸುಜಯೀಂದ್ರ ಹಂದೆ ಕೋಟ ಅವರನ್ನು ಅಭಿನಂದಿಸಿ ಮಾತನಾಡಿದರು.

ಬಹು ಮೇಳಗಳ ಯಜಮಾನ ಪಿ.ಕಿಶನ್ ಹೆಗ್ಡೆ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದರು. ಜನಸೇವಾ ಟ್ರಸ್ಟ್ ವಸಂತ್ ಗಿಳಿಯಾರ್, ಯಕ್ಷಗುರು ಲಂಬೋದರ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುದರ್ಶನ ಉರಾಳ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಯಶಸ್ವಿ ಕಲಾವೃಂದದವರಿಂದ ಹೂವಿನಕೋಲು ಹಾಗೂ ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಅವರಿಂದ ತೆಂಕು ತಿಟ್ಟು ಯಕ್ಷಗಾನ ಭೂಮಿ ಪುತ್ರ ಭೌಮಾಸುರ ಯಕ್ಷಗಾನ ರಂಗದಲ್ಲಿ ಪ್ರದರ್ಶನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net