

ಕೊಲ್ಲೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2019ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನ.7ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ನಡೆಯಲಿದೆ.
ಪ್ರವಾಸೋದ್ಯಮ, ಯುವ ಸಶಕ್ತೀಕರಣ, ಕ್ರೀಡೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಸಮಾರಂಭ ಉದ್ಘಾಟಿಸಲಿದ್ದು, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.