ಯಕ್ಷರಂಗದಲ್ಲೇ ಮಡಿದ ಬಾಯಾರು

IMG-20221223-WA0008
Published on

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು.

ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗ, ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ನಿಧನರಾದರೆಂದು ಘೋಷಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net