ಯಕ್ಷಗಾನ ಕಲಾವಿದ ನಲ್ಕ ಜಗದೀಶ ನಿಧನ

Nalka jagadish
Published on

ಹಳೆಯಂಗಡಿ: ಸಸಿಹಿತ್ಲು ಶ್ರೀ ಭಗವತಿ ಯಕ್ಷಗಾನ ಮೇಳದ ಕಲಾವಿದ, ಕಾಸರಗೋಡು ತಾಲೂಕಿನ ನಲ್ಕ ನಿವಾಸಿ ನಲ್ಕ ಜಗದೀಶ (56 ) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸಬ್ಬಣಕೋಡಿ ರಾಮಭಟ್ಟರಿಂದ ಯಕ್ಷಗಾನದ ಹೆಜ್ಜೆಗಾರಿಕೆ ಕಲಿತು ಹವ್ಯಾಸಿ ಕಲಾವಿದರಾಗಿದ್ದರು.

ಭಗವತಿ ಮೇಳದಲ್ಲಿ ಸೇವೆ

ಎಳವೆಯಲ್ಲಿಯೇ ಯಕ್ಷಗಾನ, ನಾಟಕ, ಹರಿಕಥೆ, ಏಕಪಾತ್ರಾಭಿನಯ ಮೊದಲಾದ ಹಲವು ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡು ಉತ್ತಮ ಕಲಾವಿದರಾಗಿ ರೂಪುಗೊಂಡು ಹಲವಾರು ವರ್ಷಗಳಿಂದ ಭಗವತಿ ಮೇಳದಲ್ಲಿ ಪ್ರಮುಖ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದರು. ಹೊಸ ಪ್ರಸಂಗಗಳ ಕಥಾನಾಯಕನ ಪಾತ್ರ ನಿರ್ವಹಿಸಿ ಪ್ರಸಂಗದ ಯಶಸ್ಸಿಗೆ ಕಾರಣೀಕರ್ತರಾಗಿದ್ದರು. ಭಗವತಿ ಮಹಾತ್ಮೆಯ ಈಶ್ವರ, ದೇವಿ ಮಹಾತ್ಮೆಯಲ್ಲಿ ವಿಷ್ಣು, ರಕ್ತಬೀಜ ಪಾತ್ರ ನಿರ್ವಹಿಸುತಿದ್ದರು. ಪತ್ನಿ ಹವ್ಯಾಸಿ ಯಕ್ಷಗಾನ ಕಲಾವಿದೆ ಹೇಮಾ, ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net