ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ನಿಧನ

yaksha new
Published on

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ಸೋಮವಾರ ನಿಧನರಾದರು. ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಾರಾಯಣ ಗಾಣಿಗರು ಸ್ತ್ರೀವೇಷಧಾರಿಯಾಗಿ ಪ್ರಸಿದ್ಧಿ ಪಡೆದಿದ್ದರು.

ಸುಮಾರು 28 ವರ್ಷಗಳ ಕಾಲ ಮಾರಣಕಟ್ಟೆ, ಮಂದಾರ್ತಿ, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ, ಇಡುಗುಂಜಿ ಮೇಳಗಳಲ್ಲಿ ಕಲಾಸೇವೆ ಮಾಡಿದ್ದರು. 2008ರಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿ, ಸನ್ಮಾನಗಳಿಗೆ ಭಾಜನರಾಗಿದ್ದರು. ಚಿತ್ರಾಂಗದೆ, ಮಂಡೋದರಿ ಮುಂತಾದ ಯಕ್ಷ ಪಾತ್ರಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net