

ಬೆಂಗಳೂರು: ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಸಾಧನೆ ಮಾಡಿದ್ದಾರೆ ಎಂದು ಕನ್ನಡ ಮತ್ತು ಸಂಸತಿ ಇಲಾಖೆಯ ನಿರ್ದೇಶಕಿ ಡಾ.ಧರಣೀದೇವಿ ಮಾಲಗತ್ತಿ ಹೇಳಿದ್ದಾರೆ.
ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ನಯನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 'ಯಕ್ಷಗಾನ ಉತ್ಸವ 2024' ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಮ್ಮೇಳ ಹಾಗೂ ಹಿಮ್ಮೇಳದಲ್ಲಿ ಹಿಂದಿನಿಂದಲೂ ಮಹಿಳೆಯರು ತಮ್ಮದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು ಆಯಾ ಪಾತ್ರಕ್ಕೆ ಅನುಗುಣವಾಗಿ ಧ್ವನಿಯನ್ನೂ ನೀಡಿದ್ದಾರೆ. ಯಕ್ಷಗಾನದ ಬೇರು ಆಳವಾಗಿದೆ. ಹೀಗಿರುವಾಗ ಯಗಾನವನ್ನು ಉಳಿಸಿಕೊಳ್ಳಬೇಕು, ಯಗಾನ ಅವನತಿಯತ್ತ ಸಾಗುತ್ತಿದೆ ಎಂಬಂತಹ ಮಾತುಗಳಿಗೆ ಆಸ್ಪದವಿಲ್ಲ. ಈ ಕಲೆ ವಿಶ್ವದೆಲ್ಲೆಡೆ ಇನ್ನಷ್ಟು ಪಸರಿಸಲಿದೆ ಎಂದರು.
ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ ನಿರ್ದೇಶಕಿ ಕೆ. ಗೌರಿ ಮಾತನಾಡಿ, ಸಂಸ್ಥೆ ಕಳೆದ 26 ವರ್ಷಗಳಿಂದ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ನೀಡಲಾಗುತ್ತಿದೆ. ಪ್ರಸ್ತುತ ವಿದ್ಯಾರ್ಥಿವೇತನದೊಂದಿಗೆ 12 ಮಹಿಳೆಯರಿಗೆ ಯಗಾನ ತರಬೇತಿ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಯಕ್ಷಗಾನ ವೇಷಭೂಷಣ ಹಾಗೂ ಮುಖವರ್ಣಿಕೆ ಕಮ್ಮಟ ಕಾರ್ಯಕ್ರಮವನ್ನು "ತುಳುವರೆಂಕುಲು' ಸಂದ ಕಾರ್ಯದರ್ಶಿ ಮಟ್ಟಿ ರಾಮಚಂದ್ರ ರಾವ್ ಉದ್ಘಾಟಿಸಿದರು. ಬಳಿಕ ಸಂಸ್ಥೆಯ ಕಲಾವಿದೆಯರಿಂದ ಕುಶಲವ ಕಾಳಗ, ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಿತು. ಯಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ, ರಾಜೇಶ್ ಆಚಾರ್, ಶಂಕರ್ ಹೊಸೂರು, ಉಮೇಶ್ ರಾಜ್ ಇತರರಿದ್ದರು.