ಲೋಕ ಶಿಕ್ಷಣ ನೀಡುವ ಕಲೆ ಯಕ್ಷಗಾನ: ಪೇಜಾವರ ಶ್ರೀ

udp-17-yakshagana
Published on

ಉಡುಪಿ : ಯಕ್ಷಗಾನ ಲೋಕ ಶಿಕ್ಷಣವನ್ನು ನೀಡುವ ಶ್ರೇಷ್ಠ ಕಲಾಪ್ರಕಾರ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

ಭಾನುವಾರ ಯಕ್ಷಗಾನ ಕಲಾರಂಗ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಹರ್ಷೇಂದ್ರ ಕುಮಾರ್​ ಆರ್​.ಎಲ್​ ಭಟ್​- ವಾರಿಜಾಕ್ಷಿ ಆರ್​. ಭಟ್​ ಗೌರವಾರ್ಥ ಹರಿಪ್ರಸಾದ್​ ಭಟ್​ ಪ್ರಾಯೋಜಿಸಿದ ಬಣ್ಣದ ಕೋಣೆಯನ್ನು ಉದ್ಘಾಟಿಸಿದರು. ದಾನಿ ಎಂ. ಸಿ. ಕಲ್ಕೂರ ಸಿಸಿಟಿವಿ ವ್ಯವಸ್ಥೆ ಉದ್ಘಾಟಿಸಿದರು. ಹರೀಶ್​ ರಾಯಸ್​ ಯಕ್ಷಗಾನ ಕಲಾರಂಗ ಪ್ರಶಸ್ತಿಯ ನಿಧಿಯನ್ನು ಹಸ್ತಾಂತರಿಸಿದರು. ಶಾಸಕ ಯಶ್​ಪಾಲ್​ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕೆ. ಸದಾಶಿವ ಭಟ್​ ಅಭ್ಯಾಗತರಾಗಿದ್ದರು.

ತೆಕ್ಕಟ್ಟೆ ಯಶಸ್ವಿ ಕಲಾವೃಂದ ಸಂಸ್ಥೆಗೆ ಶ್ರೀ ವಿಶ್ವೇಶತೀರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ 1 ಲಕ್ಷ ರೂ. -ಮತ್ತು ಫಲಕವನ್ನು ಸಂಸ್ಥೆಯ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಸ್ವೀಕರಿಸಿದರು. ಯಕ್ಷಗಾನ ಕಲಾರಂಗದ ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ್​ ರಾವ್​ ಅವರಿಗೆ 'ಯಕ್ಷ ಚೇತನ' ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ದಿ. ಕಪ್ಪೆಕೆರೆ ಮಾಧವ ಹೆಗಡೆ, ಪೇತ್ರಿ ಮಾಧವ ನಾಯ್ಕ್​, ಬಂಟ್ವಾಳ ಜಯರಾಮ ಆಚಾರ್ಯ ಇವರ ಕುಟುಂಬದವರಿಗೆ ತಲಾ 30,000 ರೂ. ಸಾಂತ್ವನ ನಿಧಿಯನ್ನು ನೀಡಲಾಯಿತು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಯಕ್ಷಗಾನ ಕಲಾವಿದರ 75 ಮಕ್ಕಳಿಗೆ 6,59,000 ರೂ. - ಸಹಾಯಧನವನ್ನು ವಿತರಿಸಿದರು. ವಾಸುದೇವ ಸಾಮಗರ 30 ಪ್ರಸಂಗಗಳ ಯಕ್ಷ ರಸಾಯನ ಪುಸ್ತಕವನ್ನು ಸ್ವಾಮೀಜಿಯವರು ಲೋಕಾರ್ಪಣೆ ಮಾಡಿದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್​ ಸ್ವಾಗತಿಸಿದರು. ಎಚ್​. ಎನ್​. ಶ್ರಂಗೇಶ್ವರ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್​ ನಿರೂಪಿಸಿದರು. ಸಭೆಯ ಪೂರ್ವದಲ್ಲಿ ವಿದ್ಯಾಪ್ರಸಾದ್​ ಸಂಯೋಜಿಸಿದ ತೆಂಕುತಿಟ್ಟು ಹಿಮ್ಮೇಳದ ನವರಸಾಯನ- ಯಕ್ಷಗಾಯನ ಪ್ರಸ್ತುತಗೊಂಡಿತು. ಬಳಿಕ ಸುಜಯೀಂದ್ರ ಹಂದೆಯವರ ಸಂಯೋಜನೆಯಲ್ಲಿ ಬಡಗುತಿಟ್ಟು ಯಕ್ಷಗಾನ ಬಭ್ರುವಾಹನ ಕಾಳಗ ಜರಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net