ಶ್ರೀ ಗೋಪಾಲಕೃಷ್ಣ ಸಂಘದ ಚಟುವಟಿಕೆ ಶ್ಲಾಘನಾರ್ಹ : ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ

New Project
Published on

ವಿಜಯವಾಣಿ ಸುದ್ದಿಜಾಲ ಸುಳ್ಯ

ಎಂಟು ದಶಕಗಳಿಂದ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ ನಿರಂತರ ಚಟುವಟಿಕೆಯಿಂದ ಕಲೆ, ಸಂಸ್ಕೃತಿಯ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಿದೆ ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.

ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ದೇಲಂಪಾಡಿ ಬನಾರಿಯ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 81ನೇ ವಾರ್ಷಿಕೋತ್ಸವ, ಕೀರಿಕ್ಕಾಡು ಸಂಸ್ಮರಣೆ ಹಾಗೂ ಕೀರಿಕ್ಕಾಡು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರಿಗೆ ಕೀರಿಕ್ಕಾಡು ಪ್ರಶಸ್ತಿ ಪ್ರದಾನಿಸಿ ಆಶೀರ್ವಚನ ನೀಡಿದರು.

ಮುಂಬೈ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ತಾಳ್ತಜೆ ವಸಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ಮೋಹನ ಕುಂಟಾರ್ ಅಭಿನಂದನಾ ಭಾಷಣಗೈದರು.ಹಿರಿಯ ಪತ್ರಕರ್ತ ಎಸ್.ನಿತ್ಯಾನಂದ ಪಡ್ರೆ ಕೀರಿಕ್ಕಾಡು ವಿಷ್ಣು ಭಟ್ ಸಂಸ್ಮರಣಾ ಭಾಷಣಗೈದರು. ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ತೊಟ್ಟೆತ್ತೋಡಿ ಮುಖ್ಯ ಅತಿಥಿಯಾಗಿದ್ದರು.

ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಡಾ.ರಮಾನಂದ ಬನಾರಿ ಮಂಜೇಶ್ವರ ಸ್ವಾಗತಿಸಿದರು. ಕಾರ್ಯದರ್ಶಿ ವಿಶ್ವವಿನೋದಾ ಬನಾರಿ ಸನ್ಮಾನಪತ್ರ ವಾಚಿಸಿದರು. ನಾರಾಯಣ ದೇಲಂಪಾಡಿ ವಂದಿಸಿದರು. ರಾಮಣ್ಣ ಮಾಸ್ತರ್ ದೇಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

ನಮ್ಮ ಸೌಂದರ್ಯ ಪ್ರಜ್ಞೆ, ಬದುಕಿನ ಮೌಲ್ಯಗಳು, ಕಲೆ ಸಂಸ್ಕೃತಿಗಳು ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಒಗ್ಗಿಸಿಕೊಳ್ಳುವುದು ಸವಾಲಾಗಿದ್ದು, ಈ ಬದಲಾವಣೆಗಳು ಯಕ್ಷಗಾನದ ಮೇಲೆ ಪ್ರಭಾವ ಬೀರಿಲ್ಲ. ಯಕ್ಷಗಾನವು ಕರ್ನಾಟಕದ ಕಲೆಯಾಗಬೇಕು. ಡಾ.ಎಂ.ಮೋಹನ ಆಳ್ವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ https://www.vijayavani.net/two-arrested-for-consuming-ganja-in-mangalore

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net