

ಉಡುಪಿ: ಕರಾವಳಿಯ ಕಲೆಗಳಲ್ಲಿ ಯಕ್ಷಗಾನವು ಒಂದಾಗಿದ್ದು, ಇತ್ತೀಚೆಗೆ ಯಕ್ಷ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಮಾಡುವುದು, ಅಸಹ್ಯಕರವಾಗಿ ವರ್ತನೆ ಮಾಡುವವರ ವಿರುದ್ಧ್ದ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ದ.ಕ&ಉಡುಪಿ ಕಲೆ ಮತ್ತು ಸಾಂಸತಿಕ ಪ್ರಕೋಷ್ಠ ವತಿಯಿಂದ ಉಡುಪಿ ಜಿಲ್ಲಾ ಎಸ್ಪಿ ಹಾಗು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗಿದೆ. ಸಂಚಾಲಕ ಸರಪಾಡಿ ಅಶೋಕ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೃಷ್ಣಜನ್ಮಾಷ್ಟಮಿ, ಗಣೇಶೋತ್ಸವ ಸೇರಿದಂತೆ ವಿವಿಧ ಸಭೆ ಸಮಾರಂಭಗಳಲ್ಲಿ ಯಕ್ಷಗಾನ ವೇಷಗಳನ್ನು ಧರಿಸಿಕೊಂಡು ಕಲೆಗೆ ಅಪಮಾನ ಮಾಡುತ್ತಿರುವುದು ಕಂಡು ವೃತ್ತಿಪರ ಕಲಾವಿದರಿಗೆ ತುಂಬಾ ನೋವುಂಟು ಮಾಡಿದೆ. ಯಕ್ಷಗಾನದ ವೇಷಭೂಷಣ, ಬಣ್ಣಗಾರಿಕೆಗೆ ತನ್ನದೇ ಆದ ಧಾರ್ಮಿಕ ಮಹತ್ವವಿದೆ. ಅದನ್ನು ಮರೆತು ಈ ರೀತಿಯಲ್ಲಿ ಕಲೆಯ ಗರಿಮೆಗೆ ಧಕ್ಕೆ ತರುತ್ತಿರುವ ಕಾರ್ಯಗಳು ಆಗುತ್ತಿರುವುದು ಬೇಸರ ತಂದಿದೆ ಎಂದರು.
ದ.ಕ. ಎಸ್ಪಿಯವರಿಗೆ ಮನವಿ ಸಲ್ಲಿಸಿದಾಗ ಅವರು ತಕ್ಷಣ ಸ್ಪಂದಿಸಿ ಎಲ್ಲಾ ಪೋಲಿಸ್ ಠಾಣಾ ವ್ಯಾಪ್ತಿಗಳಿಗೆ ಸುತ್ತೋಲೆ ಕಲಿಸಿ, ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಕೂಡ ಪೋಲಿಸ್ ವರಿಫಿ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ವೇಷಧಾರಿಗಳಿಂದ ಅಸಭ್ಯ ವರ್ತನೆ ಕಂಡುಬಂದಲ್ಲಿ ಸಾರ್ವಜನಿಕರು ಸ್ಥಳಿಯ ಪೋಲಿಸ್ ಠಾಣೆ ಅಥವಾ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಿದರು.
ಸುದ್ದಿಗೋಷ್ಟಿಯಲ್ಲಿ ಪ್ರಕೋಷ್ಠದ ಉಡುಪಿ ಜಿಲ್ಲಾ ಸಹ ಸಂಚಾಲಕ ಪ್ರಕಾಶ್ ಕಾಮತ್, ಉಡುಪಿ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಶ್ರೀನಿಧಿ ಹೆಗ್ಡೆ, ರಾಜಶೇಖರ್, ಸುರೇಂದ್ರ ಪಣಿಯೂರು ಉಪಸ್ಥಿತರಿದ್ದರು.