ಮೂಡಲಪಾಯ ಕಲೆಗಳ ನಿರ್ಲಕ್ಷೃದಿಂದ ಹಿನ್ನಡೆ : ಡಾ.ತಲ್ಲೂರು ಶಿವರಾಮ ಶೆಟ್ಟಿ ಖೇದ

New Project (25)
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ ಯಕ್ಷಗಾನ ಕಲೆಗೆ ವಿಶೇಷ ಉತ್ತೇಜನವಿದೆ. ಮೂಡಲಪಾಯ ಕಲೆಗಳು ಹೊಸ ತಲೆಮಾರಿನ ನಿರ್ಲಕ್ಷೃದಿಂದ ಹಿನ್ನಡೆ ಅನುಭವಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಮಂಗಳೂರು ವಿವಿಯ ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಯಕ್ಷಮಂಗಳ ಪ್ರಶಸ್ತಿ ಮತ್ತು ಕೃತಿ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಇಂಜಿನಿಯರ್‌ಗಳು, ವೈದ್ಯರು, ಶಿಕ್ಷಕರ ಸಹಿತ ವಿವಿಧ ಕ್ಷೇತ್ರಗಳ ಆಸಕ್ತರ ಮೂಲಕ ಸಮೃದ್ಧವಾಗಿ ಬೆಳೆಯುತ್ತಿರುವುದು ಯಕ್ಷಗಾನದ ಸುಯೋಗ, ವಿದ್ಯಾವಂತರು ಸೃಜನಶೀಲತೆಗೆ ಒತ್ತು ಕೊಡುವಂತೆ ಪರಂಪರೆ ಉಳಿಸಿಕೊಳ್ಳಲು ಮುಂದಾಗಬೇಕು ಎಂದರು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ ಧರ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕೇಂದ್ರ ವಿನೂತನ ಕಾರ್ಯಕ್ರಮ ನಡೆಸುತ್ತಿದೆ. ಎಲ್ಲರನ್ನು ಒಂದುಗೂಡಿಸುವ ಗುಣ ಯಕ್ಷಗಾನ ಕಲೆಗಿದೆ ಎಂದರು. ಡಾ.ರಮಾನಂದ ಬನಾರಿ, ಪ್ರೊ.ಸಾಮಗ, ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ 2024-25ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಹಾಗೂ ಅಶೋಕ ಹಾಸ್ಯಗಾರ ಅವರ ದಶರೂಪಕಗಳ ದಶಾವತಾರ ಕೃತಿ ಪ್ರಶಸ್ತಿ ನೀಡಲಾಯಿತು. ಜಾನಪದ ವಿದ್ವಾಂಸ ಪ್ರೊ.ಕೆ.ಚಿನ್ನಪ್ಪ ಗೌಡ ಅಭಿನಂದನಾ ಭಾಷಣ ಮಾಡಿದರು. ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ, ವಿದ್ವಾಂಸ ಡಾ.ಪಾದೆಕಲ್ಲು ವಿಷ್ಣುಭಟ್ ಉಪಸ್ಥಿತರಿದ್ದರು. ಯಕ್ಷಗಾನ ಗುರು ದೀವಿತ್ ಕೋಟ್ಯಾನ್ ಹಾಗೂ ಯಕ್ಷಮಂಗಳ ವಿದ್ಯಾರ್ಥಿನಿ ಕಾವ್ಯ ಹಂದೆ ಪ್ರಶಸ್ತಿ ಪತ್ರ ವಾಚಿಸಿದರು. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ಅಧಿಕಾರಿ ಡಾ.ಸತೀಶ್ ಕೊಣಾಜೆ ವಂದಿಸಿದರು. ಯಕ್ಷಮಂಗಳ ವಿದ್ಯಾರ್ಥಿನಿ ಸಾಯಿಸುಮ ನಾವಡ ನಿರೂಪಿಸಿದರು.

ಕಾಸರಗೋಡಿನ ಮಣ್ಣು ಅಚ್ಚಗನ್ನಡದ ನೆಲವಾಗಿದ್ದು ನನ್ನನ್ನು ಪ್ರಶಸ್ತಿಗೆ ಗುರುತಿಸಿದ್ದು ಕಾಸರಗೋಡಿಗೆ ಸಂದ ಗೌರವ. ಕರ್ನಾಟಕದ ಅಕಾಡೆಮಿ ಹಾಗೂ ಇತರೆ ಪ್ರಶಸ್ತಿಗಳಿಗೆ ಕಾಸರಗೋಡಿಗೆ ಪ್ರಾತಿನಿಧ್ಯ ಸಿಗಬೇಕು. ಡಾ.ರಮಾನಂದ ಬನಾರಿ ಯಕ್ಷಮಂಗಳ ಪ್ರಶಸ್ತಿ ಪುರಸ್ಕೃತ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net