ಕಲಾಪೋಷಕರಿಗೆ ಗೌರವ ಯಕ್ಷಗಾನದ ಉನ್ನತಿಗೆ ಸಹಕಾರಿ : ಸುರೇಶ್ ಶೆಟ್ಟಿ ಸಿದ್ದಕಟ್ಟೆ ಅನಿಸಿಕೆ

yakshamithra 3
ಎನ್.ಸೀತಾರಾಮ ರೈ ಅವರಿಗೆ ಯಕ್ಷಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ ಆಚಾರ್ಯ, ಪ್ರಧಾನ ಅರ್ಚಕ ಪ್ರಕಾಶ ಆಚಾರ್ಯ, ಸಿದ್ದಕಟ್ಟೆ ಪ್ರಾ.ಕೃ.ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಇದ್ದರು.
Published on

ಬಂಟ್ವಾಳ: ಸಿದ್ಧಕಟ್ಟೆ ಯಕ್ಷಮಿತ್ರರು ಶ್ರೀ ಕ್ಷೇತ್ರ ಪೂಂಜ 7ನೇ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಮಿತ್ರ ಪ್ರಶಸ್ತಿ ಪ್ರದಾನ ಹಾಗೂ ತಾಳಮದ್ದಳೆ ಕಾರ್ಯಕ್ರಮ ಇತ್ತೀಚೆಗೆ ಸಿದ್ದಕಟ್ಟೆ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಮಧ್ಯಾಹ್ನ ಸಮಿತಿ ಪ್ರಮುಖರು ಕಾರ್ಯಕ್ರಮ ಉದ್ಘಾಟಿಸಿದರು. ಸಂಜೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ, ಅರ್ಥದಾರಿ ಎನ್.ಸೀತಾರಾಮ ರೈ ಪೆರಿಂಜೆ ಅವರಿಗೆ ಯಕ್ಷಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಂಟ್ವಾಳ ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್‌ನ ಅಧ್ಯಕ್ಷ, ವಕೀಲ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಲವಾರು ಹಿರಿಯ ಕಲಾವಿದರಿಂದ ಯಕ್ಷಗಾನದಲ್ಲಿ ಸಿದ್ದಕಟ್ಟೆಯ ಹೆಸರು ಚಿರಸ್ಥಾಯಿಯಾಗಿದೆ. ಯಕ್ಷಗಾನ ಕಲಾವಿದರನ್ನು, ಕಲಾಪೋಷಕರನ್ನು ಗುರುತಿಸಿ ಗೌರವಿಸುವುದರಿಂದ ಯಕ್ಷಗಾನದ ಉನ್ನತಿಗೆ ಸಹಕಾರಿಯಾಗುವುದು, ಯಕ್ಷಮಿತ್ರರು ಪೂಂಜ ಇದರ ಕಾರ್ಯ ಅಭಿನಂದನೀಯ ಎಂದರು.

ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ ಆಚಾರ್ಯ, ಪ್ರಧಾನ ಅರ್ಚಕ ಪ್ರಕಾಶ ಆಚಾರ್ಯ, ಸಿದ್ದಕಟ್ಟೆ ಪ್ರಾ.ಕೃ.ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ರೋಟರಿಕ್ಲಬ್ ವಲಯ ಸೇನಾನಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಶಿವಯ್ಯ, ಸಮಿತಿ ಸಂಚಾಲಕ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಪ್ರಮುಖರಾದ ರತ್ನಾಕರ ಶೆಟ್ಟಿ, ದಿನೇಶ್ ಸುಂದರ ಶಾಂತಿ, ಮೈಕಲ್‌ಡಿಕೋಸ್ತ, ಸಚ್ಚಿದಾನಂದ ಭಟ್, ಉಮೇಶ್ ಹಿಂಗಾಣಿ, ಸೀತಾರಾಮ ಶೆಟ್ಟಿ, ರಾಜೇಶ್ ಶೆಟ್ಟಿ ಕೊನೆರಬೆಟ್ಟು ಹರೀಶ್ ಕಲ್ಲಬೆಟ್ಟು ಮತ್ತಿತರರಿದ್ದರು.

ಉಪನ್ಯಾಸಕ ಡಾ.ಯೊಗೀಶ್ ಕೈರೋಡಿ ಸ್ವಾಗತಿಸಿ, ಪಿಡಿಒ ಗಣೇಶ್ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಉಮೇಶ ಶೆಟ್ಟಿ ಪಾಲ್ಯ ನಿರೂಪಿಸಿದರು. ಬಳಿಕ ಜಿಲ್ಲೆಯ ಆಯ್ದ ಕಲಾವಿದರಿಂದ ವಾದ ಸಂವಾದ ಯಕ್ಷಗಾನ ತಾಳಮದ್ದಳೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net