

ಕೊಕ್ಕಡ : ಯಕ್ಷ ಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಇದರ ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ನಿಡ್ಲೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ 2024-25ನೇ ಸಾಲಿನ ಯಕ್ಷನಾಟ್ಯ ತರಬೇತಿ ಮಂಗಳವಾರ ಉದ್ಘಾಟನೆಗೊಂಡಿತು. ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಅವರು ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಫೌಂಡೇಷನ್ ಮಾಡುತ್ತಿರುವ ಕಲಾ ಸೇವೆಯ ಮತ್ತು ಕಲಾ ಪೋಷಕ ಕಾರ್ಯಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಯಕ್ಷಗಾನ ಗುರು ಈಶ್ವರ ಪ್ರಸಾದ್ ಹಾಗೂ ಮುಖ್ಯಶಿಕ್ಷಕಿ ಶಾಂತ ಶೆಟ್ಟಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆ ನೀಡಿದರು.