ಬೈಪಡಿತ್ತಾಯ ದಂಪತಿಗೆ ಯಕ್ಷಾವಾಸ್ಯಮ್ ಪ್ರಶಸ್ತಿ : ಸಾಯಿಸುಮಾ ನಾವಡ ಮಾಹಿತಿ : 8ರಂದು ಪ್ರದಾನ

Published on

ಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಚತುರ್ಥ ವಾರ್ಷಿಕೋತ್ಸವ ಡಿಸೆಂಬರ್ 8ರಂದು ಕಾಡಬೆಟ್ಟಿನ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ಸಂಚಾಲಕಿ ಸಾಯಿಸುಮಾ ನಾವಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಯಕ್ಷಾವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಕಲಾವಿದರಾದ ಹರಿನಾರಾಯಣ ಬೈಪಡಿತ್ತಾಯ, ಲೀಲಾವತಿ ಬೈಪಡಿತ್ತಾಯ ದಂಪತಿಗೆ ನೀಡಿ ಗೌರವಿಸಲಾಗುವುದು. ಕಲಾವಿದ ಚಂದ್ರಶೇಖರ ಭಟ್ ಕೊಂಕಣಾಜೆ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದರು.

ಮಧ್ಯಾಹ್ನ 2 ಗಂಟೆಗೆ ಪಿ.ಜಿನರಾಜ ಆರಿಗ ದೀಪೋಜ್ವಲನೆ ಮಾಡಲಿದ್ದಾರೆ. ಬಳಿಕ ಕೇಂದ್ರದ ವಿದ್ಯಾರ್ಥಿಗಳು ಶ್ರೀನಿವಾಸ ಬಳ್ಳಮಂಜ ನಿರ್ದೇಶನದಲ್ಲಿ ಯಕ್ಷಗಾನ ಪೂರ್ವರಂಗ ಪ್ರದರ್ಶಿಸಲಿದ್ದಾರೆ. ಬಳಿಕ ಶ್ರೀನಿವಾಸ ಬಳ್ಳಮಂಜ ಮತ್ತು ಸಾಯಿಸುಮಾ ಎಂ.ನಾವಡ ಪ್ರಸ್ತುತಿಯಲ್ಲಿ ಮಕ್ಕಳಿಂದ ಯಕ್ಷಗಾನ ನಡೆಯಲಿದೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ, ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪಕ ಚಂದ್ರಶೇಖರ ಶೆಟ್ಟಿ ಪುಳಿಮಜಲು ಮೊದಲಾದವರು ಭಾಗವಹಿಸುವರು. ವಿದ್ಯಾರ್ಥಿ ಪುರಸ್ಕಾರ, ಪೂರ್ಣಿಮಾ ಯತೀಶ್ ರೈ ನಿರ್ದೇಶನದಲ್ಲಿ ಯಕ್ಷಗಾನ ನಡೆಯಲಿದೆ ಎಂದರು.

ಯಕ್ಷಕೂಟ ಮಧ್ವ ಸಂಚಾಲಕ ಭಾಸ್ಕರ ಶೆಟ್ಟಿ ಮಧ್ವ, ಯಕ್ಷಾವಾಸ್ಯಂ ಸದಸ್ಯರಾದ ಸುಮನಾ ಯಳಚಿತ್ತಾಯ, ಪೋಷಕಿ ರತ್ನಾ ತುಕಾರಾಮ ಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net