ಮುಧೋಳದಲ್ಲಿ ಪಂಚಮಸಾಲಿ ಮೀಸಲಾತಿ ಸಮಾವೇಶ ನಾಳೆ: ಸಮಾಜದ ಜಿಲ್ಲಾಧ್ಯಕ್ಷ ಬಸನಗೌಡ ತೊಂಡಿಹಾಳ ಮಾಹಿತಿ

28112022 yelburga basanagowda tondihal
Published on

ಯಲಬುರ್ಗಾ: ಮುಧೋಳ ಗ್ರಾಮದ ಸ್ಫೂರ್ತಿ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನ.29ರಂದು ಯಲಬುರ್ಗಾ-ಕುಕನೂರು ತಾಲೂಕು ವೀರಶೈವ ಪಂಚಮಸಾಲಿ ಸಮುದಾಯದಿಂದ 2ಎ ಮೀಸಲಾತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಬಸನಗೌಡ ತೊಂಡಿಹಾಳ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಂದು ಮಹಿಳೆಯರಿಂದ ಕುಂಭ ಮೆರವಣಿಗೆ, ಯಲಬುರ್ಗಾದಿಂದ ಮುಧೋಳವರೆಗೆ ಬೈಕ್ ರ‌್ಯಾಲಿ ನಡೆಯಲಿದೆ. ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮೀ ಹೆಬ್ಬಾಳ್ಕರ್, ಕಳಕಪ್ಪ ಬಂಡಿ, ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪಾಲ್ಗೊಳ್ಳಲಿದ್ದಾರೆ. 25 ಸಾವಿರಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದೆ ಎಂದರು. ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸಮಾಜದ ತಾಲೂಕು ಅಧ್ಯಕ್ಷ ಕೆ.ಜಿ.ಪಲ್ಲೇದ, ಪ್ರಮುಖರಾದ ಬಸಲಿಂಗಪ್ಪ ಭೂತೆ, ಬಸವರಾಜ ಉಳ್ಳಾಗಡ್ಡಿ, ರಾಜಶೇಖರ ನಿಂಗೋಜಿ, ಸಿದ್ರಾಮೇಶ ಬೆಲೇರಿ, ಸುರೇಶಗೌಡ ಶಿವನಗೌಡ್ರ, ದಾನನಗೌಡ ತೊಂಡಿಹಾಳ, ಶರಣಪ್ಪ ಗೋಣಿ, ಸುರೇಶ ಹೊಸಳ್ಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net