ಸಾಂಕ್ರಾಮಿಕ ರೋಗ, ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ

Yalaburga National Anti-Dengue Month
ಯಲಬುರ್ಗಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಮಾತನಾಡಿದರು.
Published on

ಯಲಬುರ್ಗಾ: ಸೊಳ್ಳೆಗಳಿಂದ ಡೆಂಗ್ಯೂ ಸೇರಿದಂತೆ ನಾನಾ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುತ್ತವೆ. ಇವುಗಳಿಂದ ದೂರವಿರಲು ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂೆ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡ್ರಮ್, ಬ್ಯಾರಲ್, ಹಳೇ ಟೈಯರ್ ಹಾಗೂ ತೆಂಗಿನಕಾಯಿ ಚಿಪ್ಪಿನಲ್ಲಿ ಮಳೆ ನೀರು ನಿಂತು ಸಣ್ಣ ಸಣ್ಣ ಲಾರ್ವಗಳು ಹುಟ್ಟುತ್ತವೆ. ಇಡೀಸ್ ಎಂಬ ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಕಾಯಿಲೆ ಹರಡುತ್ತದೆ. ಹೀಗಾಗಿ ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯ ನೀರು ಸಂಗ್ರಹಕಾರಗಳನ್ನು ಆಗಾಗ ಸ್ವಚ್ಛಗೊಳಿಸಿ ನೀರು ತುಂಬಿಸಿ ಮುಚ್ಚಳ ಮುಚ್ಚಿಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಹದಿಹರೆಯದವರ ಆರೋಗ್ಯ ಆಪ್ತಸಮಾಲೋಚಕ ಶರಣಪ್ಪ ಉಪ್ಪಾರ, ಹದಿಹರೆಯದಲ್ಲಿ ಕಂಡುಬರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಾದ ರಕ್ತಹೀನತೆ, ಋತುಚಕ್ರ ವೇಳೆ ಶುಚಿತ್ವ ಕುರಿತು ಮಾಹಿತಿ ನೀಡಿದರು. ಪ್ರಾಚಾರ್ಯ ಶರಣಪ್ಪ ಬೇಲೇರಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಡಾ.ಸುಮತಿ, ವೀರೇಶ ಹಲಗೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net