

ಯಲಬುರ್ಗಾ: ಸುಂದರ ವಾತಾವರಣ ನಿರ್ಮಾಣಕ್ಕೆ ಆದ್ಯತೆ ನೀಡುವ ಜತೆಗೆ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಡಿಎಚ್‌ಇಡಿ ಶಿವಾನಂದ ಪೂಜಾರ ಹೇಳಿದರು.
ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಸರ್ಕಾರಿ ಪದವಿ ಪೂರ್ವ (ಪ್ರೌಢ ವಿಭಾಗ) ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಡೆಂೆ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನೆ ಮತ್ತು ಆವರಣದಲ್ಲಿ ಬ್ಯಾರಲ್, ತೊಟ್ಟಿ ಇತರ ನೀರು ಸಂಗ್ರಹಗಾರಗಳಲ್ಲಿ ತುಂಬಾ ದಿನ ನೀರು ಸಂಗ್ರಹಿಸಿಡುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂೆ, ಮಲೇರಿಯಾ ಇತರ ಸಾಂಕ್ರಾಮಿಕ ರೋಗ ಹರಡುತ್ತವೆ. ಆದ್ದರಿಂದ ನಿವಾಸಿಗಳು ಕಡ್ಡಾಯವಾಗಿ ಮನೆಯ ನೀರು ಸಂಗ್ರಹಗಾರಗಳನ್ನು ಶುಚಿಗೊಳಿಸಿ ನೀರು ತುಂಬಿ ಅವುಗಳಿಗೆ ಮುಚ್ಚಳ ಮುಚ್ಚಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅನಾರೋಗ್ಯ ಕಂಡು ಬಂದರೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆಯಬೇಕೆಂದು ಹೇಳಿದರು.
ಉಪಪ್ರಾಚಾರ್ಯ ಬಾಬುಸಾಬ್ ಲೈನದಾರ್, ಆಯುಷ್ ವೈದ್ಯಾಧಿಕಾರಿ ಡಾ.ಟಿ.ಜೆ.ಘಾಟಗೆ, ಆರ್‌ಬಿಎಸ್‌ಕೆ ವೈದ್ಯರು, ಶಾಲಾ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.