ಸಾಮಾಜಿಕ ನ್ಯಾಯದಿಂದ ಯಶಸ್ಸು ಸಾಧ್ಯ; ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶಪ್ಪ ಹಿರೇಮನಿ ಅಭಿಮತ

29082021 Yelburga BJP Meeting
Published on

ಯಲಬುರ್ಗಾದಲ್ಲಿ ತಾಲೂಕು ಕಾರ್ಯಕಾರಿಣಿ

ಯಲಬುರ್ಗಾ: ಸಾಮಾಜಿಕ ನ್ಯಾಯದಡಿ ಕಾರ್ಯ ನಿರ್ವಹಿಸಿದರೆ ಯಶಸ್ಸು ಸಾಧ್ಯ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶಪ್ಪ ಹಿರೇಮನಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಎಸ್ಸಿ ಮೋರ್ಚಾ ತಾಲೂಕು ಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಸರ್ವ ಸಮುದಾಯಗಳನ್ನು ಸಮಾನತೆಯಿಂದ ಕಾಣುತ್ತದೆ. ಮುಂಬರುವ ವಿವಿಧ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಜಿಲ್ಲಾ ಅಧ್ಯಕ್ಷ ಸಣ್ಣ ಕನಕಪ್ಪ ಛಲವಾದಿ ಮಾತನಾಡಿ, ನರೇಂದ್ರ ಮೋದಿ ಸರ್ಕಾರದಲ್ಲಿ 23 ಜನ ಹಿಂದುಳಿದ ವರ್ಗದವರು ಸಚಿವರಾಗಿದ್ದಾರೆ. ರಾಜ್ಯದಲ್ಲಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿಗೆ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಹಿರಿಯ ರಾಜಕಾರಣಿಗಳಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಿಲ್ಲ. ಇದು ಕಾಂಗ್ರೆಸ್ ದಲಿತ ವಿರೋಧಿ ಎನ್ನುವುದಕ್ಕೆ ಸಾಕ್ಷಿ ಎಂದರು.

ಮಂಡಲ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ್, ಪ್ರಧಾನ ಕಾರ್ಯದರ್ಶಿ ಶಿವಪ್ಪ ವಾದಿ, ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಕನಕಮೂರ್ತಿ ಛಲವಾದಿ, ತಾಲೂಕು ಅಧ್ಯಕ್ಷ ಸಂಗಪ್ಪ ಜೋಗಣ್ಣವರ್, ಪ್ರಮುಖರಾದ ಕನಕಮೂರ್ತಿ ಛಲವಾದಿ, ವೀಣಾ, ಸುಭಾಷ್ ಮದಕಟ್ಟಿ, ಮರಿಸ್ವಾಮಿ ಮಣ್ಣಿನವರ್, ರುದ್ರಪ್ಪ ಛಲವಾದಿ, ಶರಣಪ್ಪ ಹಿರೇಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net