ಕುಡಿವ ನೀರು ಪೂರೈಕೆಗೆ ಒತ್ತಾಯ

07042020 Yelburga Bandi GP Opposite protest
Published on

ಯಲಬುರ್ಗಾ: ಸಮರ್ಪಕ ಕುಡಿವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ತಾಲೂಕಿನ ಬಂಡಿ ಗ್ರಾಪಂ ಮುಂದೆ ಸಾರ್ವಜನಿಕರು ಖಾಲಿ ಕೊಡ ಹಿಡಿದು ಮಂಗಳವಾರ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಕಳೆದ ವಾರದಿಂದ ಸಮರ್ಪಕವಾಗಿ ಕುಡಿವ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಸಮಸ್ಯೆ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ತಕ್ಷಣವೇ ಕುಡಿವ ನೀರು ಪೂರೈಕೆಗೆ ಗ್ರಾಮಸ್ಥರು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net