ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಆರೋಗ್ಯ-ಹುಣಸಿಹಾಳದ ಶಿವಶಾಂತವೀರ ಸ್ವಾಮೀಜಿ ಹೇಳಿಕೆ

161121 Bevoor Liquor camps organized
ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರದಲ್ಲಿ ಹುಣಸಿಹಾಳದ ಶಿವಶಾಂತವೀರ ಸ್ವಾಮೀಜಿ ಮಾತನಾಡಿದರು.
Published on

ಯಲಬುರ್ಗಾ: ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಹುಣಸಿಹಾಳದ ಶಿವಶಾಂತವೀರ ಸ್ವಾಮೀಜಿ ಹೇಳಿದರು.

ತಾಲೂಕಿನ ಬೇವೂರು ಗ್ರಾಮದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮದ್ಯಪಾನ ಸಂಯಮ ಮಂಡಳಿ, ಆರೋಗ್ಯ ಇಲಾಖೆ, ಗ್ರಾಪಂ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಆರೋಗ್ಯ ಚೆನ್ನಾಗಿದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು. ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂಪಿಸಿದ ನಾನಾ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಆರ್ಥಿಕ ಸ್ವಾವಲಂಬಿಗಳಾಗಬೇಕು ಎಂದರು.

ಗ್ರಾಪಂ ಅಧ್ಯಕ್ಷ ಸೋಮಲಿಂಗಪ್ಪ ಕೊಳಜಿ, ಉಪಾಧ್ಯಕ್ಷೆ ಅನ್ನಪೂರ್ಣಾ ಗಡ್ಡದ, ಸದಸ್ಯ ಭೀಮೇಶ, ಯೋಜನೆಯ ಪ್ರಾದೇಶಿಕ ನಿರ್ದೇಶಕ ಪಿ.ಕೆ.ಪುರುಷೋತ್ತಮ, ಜನಜಾಗೃತಿ ಸಮಿತಿ ಸದಸ್ಯ ಶರಣಬಸಪ್ಪ ದಾನಕೈ, ವಣಗೇರಿ ಗ್ರಾಪಂ ಅಧ್ಯಕ್ಷ ಶರಣಪ್ಪ ದಿವಾಣದಾರ, ತಾಪಂ ಮಾಜಿ ಸದಸ್ಯ ಶಂಕರಗೌಡ ಟಣಕನಕಲ್, ಪ್ರಮುಖರಾದ ಸಂಗಣ್ಣ ಟೆಂಗಿನಕಾಯಿ, ಬಸಣ್ಣ ಚಿತ್ತವಾಡಗಿ, ಯೋಜನಾಧಿಕಾರಿ ಸತೀಶ ಗಾಂವಕರ್, ನಿರ್ದೇಶಕರಾದ ಸದಾನಂದ ಬಂಗೇರ, ಮಾಧವ ನಾಯಕ, ಮೇಲ್ವಿಚಾರಕ ಎ.ಎಸ್.ಜಿ.ಸಿದ್ರಾಮ್, ಶಿಬಿರಾಧಿಕಾರಿ ದಿವಾಕರ ಪೂಜಾರ, ಆರೋಗ್ಯ ಸಹಾಯಕಿಯರಾದ ಫಿಲೋಮಿನಾ ಡಿಸೋಜ, ಉಮಾದೇವಿ, ಯೋಗ ಶಿಕ್ಷಕ ಮಾರುತೇಶ ಚಿತ್ರಗಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net