ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ

Tuition Class Inauguration Program
ಚಿಕ್ಕಮ್ಯಾಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಟ್ಯೂಷನ್ ತರಗತಿಗೆ ಎಸ್ಡಿಎಂಸಿ ಅಧ್ಯಕ್ಷ ಈರಪ್ಪ ಕುಡಗುಂಟಿ ಚಾಲನೆ ನೀಡಿದರು. ಗ್ರಾಪಂ ಸದಸ್ಯ ಶರಣಕುಮಾರ ಅಮರಗಟ್ಟಿ, ಎಸ್‌ಕೆಡಿಆರ್‌ಡಿಪಿ ಯೋಜನಾಧಿಕಾರಿ ಸತೀಶ, ಮುಖ್ಯಶಿಕ್ಷಕ ಸುರೇಶ ವೇದಪಾಠಕ, ಎಸ್ಡಿಎಂಸಿ ಸದಸ್ಯರಾದ ಪ್ರಭು ಮೇಟಿ, ಯಮನೂರಪ್ಪ ಇದ್ದರು.
Published on

ಯಲಬುರ್ಗಾ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಸಂಸ್ಥೆಯ ಟ್ಯೂಷನ್ (ಬೋಧನೆ) ತರಗತಿಯ ಲಾಭವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದು ಗ್ರಾಪಂ ಸದಸ್ಯ ಶರಣಕುಮಾರ ಅಮರಗಟ್ಟಿ ಹೇಳಿದರು.

ತಾಲೂಕಿನ ಚಿಕ್ಕಮ್ಯಾಗೇರಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಸಂಸ್ಥೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್‌ಕೆಡಿಆರ್‌ಡಿಪಿ ಯೋಜನೆಯಿಂದ ಮಹಿಳೆಯರ ಸಬಲೀಕರಣ ಜತೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮ ರೂಪಿಸಲಾಗಿದೆ. ಎಲ್ಲರೂ ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ಅದರಂತೆ ಸಂಸ್ಥೆಯು ಗ್ರಾಮೀಣ ಮಕ್ಕಳ ಶಿಕ್ಷಣಕ್ಕೂ ಆದ್ಯತೆ ನೀಡಿದೆ ಎಂದರು.

ಸಂಸ್ಥೆಯ ಯೋಜನಾಧಿಕಾರಿ ಸತೀಶ ಮಾತನಾಡಿ, ಜ್ಞಾನವಿಕಾಸ ಯೋಜನೆಯಡಿ ಮಹಿಳೆಯರಿಗೆ ಹಲವು ಕಾರ್ಯಕ್ರಮಗಳಿವೆ. ಅದರಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಟ್ಯೂಷನ್ ಕ್ಲಾಸ್ ನಡೆಸುತ್ತಿದ್ದು, ಮೂರು ತಿಂಗಳ ಕಾಲ ತರಗತಿ ನಡೆಯಲಿವೆ. ವಿದ್ಯಾರ್ಥಿಗಳು ಇದರ ಲಾಭ ಪಡೆಯುವ ಮೂಲಕ ಶೇ.100 ಫಲಿತಾಂಶ ಪಡೆಯಬೇಕು ಎಂದರು.

ಎಸ್ಡಿಎಂಸಿ ಅಧ್ಯಕ್ಷ ಈರಪ್ಪ ಕುಡಗುಂಟಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಶಿಕ್ಷಕ ಸುರೇಶ ವೇದಪಾಠಕ, ಎಸ್ಡಿಎಂಸಿ ಸದಸ್ಯರಾದ ಪ್ರಭು ಮೇಟಿ, ಯಮನೂರಪ್ಪ, ಒಕ್ಕೂಟದ ಅಧ್ಯಕ್ಷೆ ಗೀತಾ, ಮೇಲ್ವಿಚಾರಕಿ ಚನ್ನಮ್ಮ, ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ಶಿಕ್ಷಕಿ ನೇತ್ರಾವತಿ, ಸೇವಾಪ್ರತಿನಿಧಿ ಸಂಗನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net